ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ (ಡಿಡಿಪಿಯು) ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗೆ ವರ್ಗಾಯಿಸುವ ಪ್ರಸ್ತಾವ ಸರ್ಕಾರದ ಎದುರು ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಧಾನ ಪರಿಷತ್ತಿನ ಕಲಾಪದ ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ಪುಟ್ಟಣ್ಣ, ಜೆಡಿಎಸ್ನ ಎಸ್.ಎಲ್.ಭೋಜೇಗೌಡ ಅವರು ವಿಷಯ ಪ್ರಸ್ತಾಪಿಸಿ, ‘ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಹೇಳಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗೆ ವರ್ಗಾಯಿಸುವ ಪ್ರಸ್ತಾವವನ್ನು ಸರ್ಕಾರ ಕೈಬಿಡಬೇಕು’ ಎಂದು ಇಬ್ಬರು ಸದಸ್ಯರೂ ಒತ್ತಾಯಿಸಿದರು.

ಆಗ ಸಚಿವ ಮಧು ಬಂಗಾರಪ್ಪ, ‘ಈ ಹಿಂದೆ ಅಂತಹ ಆದೇಶ ಹೊರಡಿಸಲಾಗಿತ್ತು. ಆದರೆ ಈಗಾಗಲೇ ಅದನ್ನು ವಾಪಸ್ ಪಡೆಯಲಾಗಿದೆ. ಇದನ್ನು ಉಪನ್ಯಾಸಕರ ಸಂಘಗಳಿಗೂ ಮನವರಿಕೆ ಮಾಡಿಕೊಡಲಾಗಿತ್ತು. ಹೀಗಿದ್ದೂ ಸಂಘವು ಮೌಲ್ಯಮಾಪನ ಬಹಿಷ್ಕಾರ ನಡೆಸುವುದಾಗಿ ಹೇಳಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಮಾರ್ಚ್ 20ರಿಂದ ಮೌಲ್ಯಮಾಪನ ಆರಂಭವಾಗಬೇಕಿದೆ. ಇಂತಹ ಸಂದರ್ಭದಲ್ಲಿ ಬಹಿಷ್ಕಾರದ ಹೇಳಿಕೆಯು ‘ಬ್ಲ್ಯಾಕ್ಮೇಲ್’ ಆಗುತ್ತದೆ. ಅವರ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಉಪನ್ಯಾಸಕರೆಲ್ಲರೂ ಮೌಲ್ಯಮಾಪನಕ್ಕೆ ಹಾಜರಾಗಬೇಕು’ ಎಂದರು.

‘ಮೂರು ವರ್ಷಗಳಿಂದ ಬಾಕಿ ಇರುವ ಮೌಲ್ಯಮಾಪನ ಭತ್ಯೆ ಬಾಕಿಯನ್ನು ಇದೇ 20ರೊಳಗೆ ಬಿಡುಗಡೆ ಮಾಡುತ್ತೇವೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.