ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Education | ಪಿಯು ಕಾಲೇಜುಗಳು ಇಂದಿನಿಂದ ಆರಂಭ

Published 31 ಮೇ 2024, 23:30 IST
Last Updated 31 ಮೇ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಜೂನ್‌ 1ರಿಂದ ಪುನರಾರಂಭವಾಗುತ್ತಿವೆ. 

ಅಕ್ಟೋಬರ್‌ 2ರಿಂದ ಅ. 18ರವರೆಗೆ ದಸರಾ ರಜೆ ಇದ್ದು, ಅ.19ರಿಂದ ಮಾರ್ಚ್‌ 31ರವರೆಗೆ (2025) ಎರಡನೆ ಅವಧಿಯ ತರಗತಿಗಳು ನಡೆಯಲಿವೆ. ಏ.1ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 9.30ರಿಂದ 3.30 ರವರೆಗೆ ಅಥವಾ 10.30ರಿಂದ 4.30ರವರೆಗೆ ತರಗತಿಗಳನ್ನು ನಡೆಸಲು ಸ್ಥಳೀಯ ಅನುಕೂಲಕ್ಕೆ ತಕ್ಕಂತೆ ಆಯಾ ಕಾಲೇಜುಗಳ ಪ್ರಾಂಶುಪಾಲರು ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ.

2024–25ನೇ ಸಾಲಿನ ಪದವಿ ಪೂರ್ವ ಕೋರ್ಸ್‌ಗಳಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಿವೆ. ವಿದ್ಯಾರ್ಥಿಗಳು ದಂಡ ಶುಲ್ಕವಿಲ್ಲದೇ ಜೂನ್‌ 14ರ ಒಳಗೆ ಪ್ರವೇಶ ಪಡೆಯಬಹುದು. ದ್ವಿತೀಯ ಪಿಯು ಸೇರಿದಂತೆ ಜೂನ್‌ 29ರ ಒಳಗೆ ಎಲ್ಲ ಪ್ರವೇಶ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ.

ಪ್ರವೇಶ ಶುಲ್ಕಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಇದ್ದಂತೆ ಮುಂದುವರಿಯಲಿದ್ದು, ಯಾವುದೇ ಬದಲಾವಣೆ ಮಾಡಿಲ್ಲ. ಮಾರ್ಗಸೂಚಿಯಂತೆ ಎಲ್ಲ ಕಾಲೇಜುಗಳು ಮೀಸಲಾತಿ ಅನ್ವಯ ಮೆರಿಟ್‌ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ಪಿಯು ನಿರ್ದೇಶನಾಲಯ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT