ಬೆಂಗಳೂರು: 2024–25ನೇ ಸಾಲಿನಲ್ಲಿ ನಡೆದ ಸೀಟ್ ಬ್ಲಾಕಿಂಗ್ ಹಗರಣದ ತನಿಖೆಯ ವರದಿ ಇಲ್ಲಿಯವರೆಗೂ ಕೈಸೇರಿಲ್ಲ. ಪೊಲೀಸ್ ಕಮಿಷನರ್ ಬಿ. ದಯಾನಂದ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣದ ನಂತರ ಪೊಲೀಸರು ಕೆಲವರನ್ನು ಬಂಧಿಸಿದ್ದರು. ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಹಗರಣದಲ್ಲಿ ಹೆಸರಿಸಲಾದ ಕಾಲೇಜುಗಳ ಪಾತ್ರದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಪಡೆಯಲಾಗುವುದು ಎಂದರು.

ಹಗರಣದಲ್ಲಿ ಪ್ರಮುಖವಾಗಿ ಹೆಸರು ಕೇಳಿ ಬಂದಿದ್ದ ಬಿಎಂಎಸ್ ಕಾಲೇಜು ಆ ಶೈಕ್ಷಣಿಕ ವರ್ಷದಲ್ಲಿ ಉಳಿಕೆಯಾದ ಯಾವ ಸೀಟು ಭರ್ತಿ ಮಾಡಿಲ್ಲ ಎಂದು ಮಾಹಿತಿ ನೀಡಿದೆ. ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಭಾಗಿಯಾದ ಇತರೆ ಕಾಲೇಜುಗಳ ಪಾತ್ರದ ಬಗ್ಗೆ ವರದಿ ನೀಡಲು ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂಬ ಮಾಹಿತಿ ಬೇಕಿದೆ ಎಂದು ಹೇಳಿದರು.

ಸೀಟ್ ಬ್ಲಾಕಿಂಗ್ ತಡೆಗೆ ಈ ವರ್ಷ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂತಹ ಪ್ರಕರಣಗಳು ಮತ್ತೆ ಮರುಕಳಿಸುವುದಿಲ್ಲ ಎನ್ನುವ ಭರವಸೆ ಮೂಡಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.