ಬೆಂಗಳೂರು: ‘ಕ್ಷತ್ರಿಯ ಜನಾಂಗದ ಎಲ್ಲ ಪಂಗಡಗಳನ್ನೂ ಒಗ್ಗೂಡಿಸುವ ಸಲುವಾಗಿ ಇದೇ 14ರಂದು ಕ್ಷತ್ರಿಯ ಏಕತಾ ರಥ ಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಜನ ಸಮೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷ ಶೈಲೇಶ್ ನಾಜರೆ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭಾನುವಾರ ಬೆಳಿಗ್ಗೆ 9.30ಕ್ಕೆ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ನಾಡದೇವಿ ಚಾಮುಂಡೇಶ್ವರಿ ದೇವಿ, ಶಿವಾಜಿ ಮಹಾರಾಜ ಹಾಗೂ ಆರಾಧ್ಯ ದೈವ ಪಾಂಡುರಂಗನ ರಥವು ಹೊರಡಲಿದೆ. ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಈ ಯಾತ್ರೆ ಕೊನೆಗೊಳ್ಳಲಿದ್ದು ಅಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.