ಬೆಂಗಳೂರು: ಎರಡು ವಿಧಾನಸಭೆ ಹಾಗೂ ಮೂರು ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದು ಬಿಜೆಪಿಗೆ ಹಿನ್ನಡೆ ಉಂಟಾಗಿದೆ.
ಆರಂಭಿಕ ಮತ ಎಣಿಕೆ ಸುತ್ತಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ, ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.