ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಬಾಂಡ್‌ನಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: ಎಂ.ಬಿ ಪಾಟೀಲ

ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ: ಎಂ.ಬಿ ಪಾಟೀಲ
Published 18 ಮಾರ್ಚ್ 2024, 7:49 IST
Last Updated 18 ಮಾರ್ಚ್ 2024, 7:49 IST
ಅಕ್ಷರ ಗಾತ್ರ

ಬೆಂಗಳೂರು: 'ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿಬಿದ್ದಿದೆ' ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, 'ಮೋದಿಯವರು, 'ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ" ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ' ಎಂದರು.

'ಹೆಚ್ಚಿನ ಸಂದರ್ಭಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಳಿಗೆ ಒಳಗಾದ ನಂತರ ಅಥವಾ ಗುತ್ತಿಗೆಗಳನ್ನು ಪಡೆದ ನಂತರ ಬಿಜೆಪಿ ಹೆಸರಲ್ಲಿ ಚುನಾವಣಾ ಬಾಂಡ್ ತೆಗೆದುಕೊಂಡಿರುವುದು ಬಹಿರಂಗಗೊಂಡಿದೆ. ಇದರಿಂದಾಗಿ, ಭ್ರಷ್ಟಾಚಾರ, ನೈತಿಕತೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದ ಮೋದಿ ಅವರ ನಿಜವಾದ ಬಣ್ಣ ಏನು ಎಂಬುದು ಗೊತ್ತಾಗಿದೆ' ಎಂದು ವಿವರಿಸಿದರು.

'ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂಥದ್ದು. ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂಥದ್ದಲ್ಲ' ಎಂದು ಪಾಟೀಲ ಸಮರ್ಥಿಸಿಕೊಂಡರು.

'ಚುನಾವಣಾ ಬಾಂಡ್ ವಿಷಯ ಇಷ್ಟಕ್ಕೇ ನಿಲ್ಲುವುದಿಲ್ಲ. ಇದರ ಆಳ ಬಹಳ ಇದೆ. ಇದು ಇನ್ನೂ ಮುಂದುವರಿಯಲಿದೆ. ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಎಲ್ಲ ಪಕ್ಷಗಳನ್ನೂ ತನಿಖೆಗೆ ಒಳಪಡಿಸಲಿ' ಎಂದು ಅವರು ಒತ್ತಿ ಹೇಳಿದರು.

'ಚುನಾವಣಾ ಬಾಂಡ್ ವ್ಯವಸ್ಥೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಸಾಧ್ಯ ಎಂದು ಭಾವಿಸಲಾಗಿತ್ತು. ಆದರೆ, ಇದರ ದುರುಪಯೋಗವೇ ಜಾಸ್ತಿಯಾಗಿದೆ' ಎಂದೂ ಅವರು ಹೇಳಿದರು.

ಮೋದಿಗೆ ಕಾಳಜಿ ಇಲ್ಲ: 'ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. ಹೀಗಾಗಿಯೇ, ರಾಜ್ಯದಲ್ಲಿ ಬರ ಇದ್ದಾಗ ಅವರು ಈ ಕಡೆ ಸುಳಿಯಲಿಲ್ಲ. ಈಗ, ಚುನಾವಣೆ ಎಂದ ತಕ್ಷಣ ಎರಡು ಬಾರಿ ರಾಜ್ಯಕ್ಕೆ ಭೇಟಿ ಕೊಟ್ಟಿದ್ದಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT