ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ: ಸಚಿವರಿಂದ ವರದಿ ಪಡೆದ ಸಿದ್ದರಾಮಯ್ಯ

Published 14 ಮೇ 2024, 23:30 IST
Last Updated 14 ಮೇ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಜಿ.ಪರಮೇಶ್ವರ ಸೇರಿದಂತೆ ಕೆಲವು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿ ತಮಗೆ ಉಸ್ತುವಾರಿ ವಹಿಸಿದ್ದ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿನ ಸಾಧ್ಯತೆ ಕುರಿತು ನೀಡಿದರು.

ಮುಖ್ಯಮಂತ್ರಿಯವರು ಮೈಸೂರು ಪ್ರವಾಸಕ್ಕೆ ತೆರಳುವ ಮುನ್ನ ಅವರ ಸರ್ಕಾರಿ ನಿವಾಸ ಕಾವೇರಿಗೆ ಬಂದ ಪರಮೇಶ್ವರ ಅವರು ಕೆಲ ಹೊತ್ತು ಚರ್ಚಿಸಿದರು. ಚುನಾವಣೆ ಬೆಳವಣಿಗೆಗಳ ಜತೆಯಲ್ಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪ್ರಕರಣ, ಶಾಸಕ ಎಚ್‌.ಡಿ.ರೇವಣ್ಣ ಬಂಧನ ಮತ್ತು ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಶಿವಕುಮಾರ್‌, ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ, ಮಧು ಬಂಗಾರಪ್ಪ, ಎನ್‌.ಚಲುವರಾಯಸ್ವಾಮಿ ಅವರು ಕುರಿತು ವರದಿ ನೀಡಿದರು. ಕೆಲಕಾಲ ಎಲ್ಲ ಸಚಿವರೊಂದಿಗೆ ಒಟ್ಟಾಗಿ ಸಿದ್ದರಾಮಯ್ಯ ಚರ್ಚಿಸಿದರು. ಸಭೆಯ ಬಳಿಕ ಮುಖ್ಯಮಂತ್ರಿಯವರು ಮೈಸೂರಿನತ್ತ ತೆರಳಿದರು.

ಮುಖ್ಯಮಂತ್ರಿಯವರ ಭೇಟಿ ಡಿದ ಬಳಿಕ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ತೆರಳಿದ ಪರಮೇಶ್ವರ, ಅವರೊಂದಿಗೂ ಕೆಲಕಾಲ ಚರ್ಚೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT