ನವದೆಹಲಿ: ವಿಧಾನ ಪರಿಷತ್ಗೆ ಮೂರು ಪದವೀಧರರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಂದ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ. ಲೋಕಸಭಾ ಚುನಾವಣೆಯ ಬೆನ್ನಲ್ಲೇ, ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜಾಗಿದೆ.

ಜೂನ್ 3ರಂದು ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಮಾದರಿ ನೀತಿಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಬಿ.ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಭೋಜೇಗೌಡ ಅವರ ಅವಧಿ ಜೂನ್ 21ಕ್ಕೆ ಕೊನೆ ಆಗಲಿದೆ. ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದ ಆಯನೂರು ಮಂಜುನಾಥ ತಮ್ಮ ಸ್ಥಾನಕ್ಕೆ 2023ರ ಏಪ್ರಿಲ್ 19ರಂದು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ನಿಂದ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಈ ವರ್ಷದ ಮಾರ್ಚ್ 21ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ ಪಾಟೀಲ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಆಯನೂರು ಮಂಜುನಾಥ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಸಂಭವ ಇದೆ.

ಬಿಜೆಪಿಯ ರಾಜ್ಯ ಘಟಕವು ಆರು ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಿ ಎರಡು ತಿಂಗಳು ಕಳೆದಿವೆ. ಬಿಜೆಪಿ ವರಿಷ್ಠರು ಈ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಈ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಇರಲಿದೆಯೇ ಎಂಬುದು ಸ್ಪಷ್ಟಗೊಂಡಿಲ್ಲ. ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಿಂದಾಗಿ ಮುಜುಗರಕ್ಕೆ ಸಿಲುಕಿರುವ ಬಿಜೆಪಿಯು ಜೆಡಿಎಸ್ ಜತೆಗಿನ ಮೈತ್ರಿ ಮುಂದುವರಿಸುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಎ.ಎಚ್.ಆನಂದ್ ಹಾಗೂ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜಗೌಡ ಹಾಗೂ ವಿನಯ್, ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಅಮರನಾಥ ಪಾಟೀಲ, ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಡಾ.ಸರ್ಜಿ ಹಾಗೂ ವಿಕಾಸ್ ಪುತ್ತೂರು ಮಂಚೂಣಿಯಲ್ಲಿದೆ ಎಂದು ಮೂಲಗಳು ಹೇಳಿವೆ.

ವೇಳಾಪಟ್ಟಿ

ಚುನಾವಣೆ ಅಧಿಸೂಚನೆ: ಮೇ 09, 2024

ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024

ನಾಮಪತ್ರ ಪರಿಶೀಲನೆ: ಮೇ 17, 2024

ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024

ಮತದಾನ: ಜೂನ್ 03, 2024

ಮತ ಎಣಿಕೆ: ಜೂನ್ 06, 2024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.