ಬೆಂಗಳೂರು: ಇದೇ 16ಕ್ಕೆ ನಿಗದಿಯಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಚುನಾವಣೆಯನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯುವಂತೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲರು ಆದೇಶಿಸಿದ್ದಾರೆ.

‘ಚುನಾವಣೆಯಲ್ಲಿ ವ್ಯಾಪಕ ಅಕ್ರಮಗಳನ್ನು ಎಸಗುವ ಸಾಧ್ಯತೆ ಇದೆ’ ಎಂದು ಕೆಂಪೇಗೌಡ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪಿ.ಅರ್ಪಿತಾ ಮತ್ತು ವೈದೇಹಿ ವೈದ್ಯಕೀಯ ಕಾಲೇಜಿನ ಡಾ.ಜಿ.ಟಿ.ಹರ್ಷ 2024 ಡಿಸೆಂಬರ್ 30ರಂದು ರಾಜ್ಯಪಾಲರಿಗೆ ದೂರು ನೀಡಿದ್ದರು.

‘ದೂರಿನ ಹಿನ್ನೆಲೆಯಲ್ಲಿ ಸಿಂಡಿಕೇಟ್ ಚುನಾವಣೆಯನ್ನು ಮುಂದಿನ ಆದೇಶದವರೆಗೆ ಅಮಾನತ್ತಿನಲ್ಲಿ ಇರಿಸುವಂತೆ ಆದೇಶಿಸಲಾಗಿದೆ’ ಎಂದು ರಾಜ್ಯಪಾಲರ ಸಚಿವಾಲಯ ತಿಳಿಸಿದೆ.

ಅಂತೆಯೇ, '15 ದಿನಗಳ ಒಳಗಾಗಿ ದೂರಿಗೆ ಸಂಬಂಧಿಸಿದಂತೆ ಸೂಕ್ತ ವಿವರಣೆ ನೀಡಿ’ ಎಂದು ಎದುರುದಾರರಿಗೆ ಸೂಚಿಸಲಾಗಿದೆ. ಆರ್ಜಿಯುಎಚ್ಎಸ್ನ 10ನೇ ಸೆನೆಟ್ ರಚನೆಗಾಗಿ, ಸಿಂಡಿಕೇಟ್ ಸದಸ್ಯರ ಆಯ್ಕೆ ಮಾಡಲು ಇದೇ 16ರಂದು ಚುನಾವಣೆ ನಿಗದಿಪಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.