ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಸಿ.ಎಂ ಆಯ್ಕೆ: ಬಿಜೆಪಿಗೆ ಅಸೂಯೆ– ಸಚಿವ ದಿನೇಶ್‌ ಗುಂಡೂರಾವ್‌

Published 7 ಡಿಸೆಂಬರ್ 2023, 16:16 IST
Last Updated 7 ಡಿಸೆಂಬರ್ 2023, 16:16 IST
ಅಕ್ಷರ ಗಾತ್ರ

ಬೆಳಗಾವಿ: ‘ತೆಲಂಗಾಣದಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನು ಎಲ್ಲರೂ ಒಗ್ಗಟ್ಟಾಗಿ ನಿರ್ವಹಿಸಿದ್ದೇವೆ. ಬಿಜೆಪಿ ಅಸೂಯೆ ಪಡುವ ಬದಲು ತಾನು ಗೆದ್ದಿರುವ ರಾಜ್ಯಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಮಾಡಿಕೊಳ್ಳಲಿ’ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದಕ್ಷಿಣ ಭಾರತದ ಎರಡನೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿರುವುದಕ್ಕೆ ರಾಜ್ಯ ಬಿಜೆಪಿ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಸಚಿವರಾಗಿ ನಮ್ಮ ಕರ್ತವ್ಯ ಅರಿತಿದ್ದೇವೆ. ಜತೆಗೆ, ತೆಲಂಗಾಣದಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನೂ ಸಮರ್ಥವಾಗಿ ನಿಭಾಯಿಸಿದ್ದೇವೆ. ರಾಜ್ಯದ ಕಾಂಗ್ರೆಸ್ ನಾಯಕರಿಗೆ ತೆಲಂಗಾಣದಲ್ಲೇನು ಕೆಲಸ ಎಂಬ ಬಿಜೆಪಿ ಟೀಕೆ ಅರ್ಥಹೀನ’ ಎಂದರು.

‘ನನ್ನನ್ನೂ ಸೇರಿದಂತೆ ರಾಜ್ಯದ ಪ್ರಮುಖ ನಾಯಕರಿಗೆ ಪಕ್ಷ ಜವಾಬ್ದಾರಿ ವಹಿಸಿತ್ತು. ನನಗೆ ತೆಲಂಗಾಣದ ವಾರಂಗಲ್‌ ಜಿಲ್ಲೆಯ ಕ್ಷೇತ್ರಗಳ ಜವಾಬ್ದಾರಿ ನೀಡಲಾಗಿತ್ತು. ವಾರಂಗಲ್‌ನ 11 ಕ್ಷೇತ್ರಗಳಲ್ಲಿ 10 ಗೆದ್ದಿದ್ದೇವೆ. ಆ ಭಾಗದಲ್ಲಿ ಕಾಂಗ್ರೆಸ್‌ಗೆ ಘಟಾನುಘಟಿ ನಾಯಕರೇ ಎದುರಾಳಿಯಾಗಿದ್ದರು. ರಾಜಕೀಯ ತಂತ್ರಗಾರಿಕೆ  ಹಾಗೂ ಪಕ್ಷದ ಕಾರ್ಯಕ್ರಮಗಳು ಕೈ ಹಿಡಿದವು’ ಎಂದು ವಿವರಿಸಿದರು.

ಫಲಿತಾಂಶ ಪ್ರಕಟವಾದ ಎರಡೇ ದಿನಗಳಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಸುಲಲಿತವಾಗಿ ಸರ್ಕಾರ ರಚಿಸಲು ಅನುವು ಮಾಡಿಕೊಟ್ಟಿದೆ. ಆದರೆ, ಉತ್ತರ ಭಾರತದ ಮೂರು ರಾಜ್ಯಗಳಲ್ಲಿ‌ ಗೆದ್ದಿರುವ ಬಿಜೆಪಿಗೆ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT