ಬೆಂಗಳೂರು: ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ ಅಂತ್ಯದ ತನಕ ಮುಂದೂಡಲು ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರವನ್ನು ಸರ್ಕಾರ ಹೈಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದೆ.

ಕಾಲಮಿತಿಯಲ್ಲಿ ಚುನಾವಣೆ ನಡೆಸಲು ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಮೇ 17ರಂದು ಈ ನಿರ್ಣಯ ಕೈಗೊಳ್ಳಲಾಗಿದ್ದು, ಆ ಸಂದರ್ಭದಲ್ಲಿ ದಿನಕ್ಕೆ 40 ಸಾವಿರ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದವು’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಎಸ್. ನಾವಡಗಿ ವಿವರಿಸಿದರು.

ಅಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಕಷ್ಟ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೀಸಲಾತಿ ಪಟ್ಟಿ ಸೇರಿ ನ್ಯಾಯಾಲಯದ ನಿರ್ದೇಶನದಂತೆ ಎಲ್ಲಾ ರೀತಿಯ ನೆರವನ್ನು ಸರ್ಕಾರ ಆಯೋಗಕ್ಕೆ ನೀಡುತ್ತಿದೆ ಎಂದು ವಿವರಿಸಿದರು.

ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು, ‘ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆ ಮತ್ತು ತರೀಕೆರೆ ಪುರಸಭೆ ಚುನಾವಣೆಗೆ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟಿಸಲಾಗಿದೆ’ ಎಂದ ತಿಳಿಸಿದರು.

‘ಸರ್ಕಾರ ಶಿಫಾರಸು ಮಾಡಬಹುದು, ಚುನಾವಣೆ ಮುಂದೂಡುವುದು ಅಥವಾ ನಡೆಸುವುದು ಆಯೋಗಕ್ಕೆ ಬಿಟ್ಟ ವಿಚಾರ’ ಎಂದು ತಿಳಿಸಿದ ಪೀಠ, ವಿಚಾಣೆಯನ್ನು ಸೆ.14ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.