ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 5.88 ಕೋಟಿ ಮೌಲ್ಯದ ಸ್ವತ್ತುಗಳ ವಶ

Published 28 ಏಪ್ರಿಲ್ 2023, 16:16 IST
Last Updated 28 ಏಪ್ರಿಲ್ 2023, 16:16 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ಅಕ್ರಮ ತಡೆಗೆ ನೇಮಿಸಿರುವ ಜಾಗೃತ ದಳಗಳು ಹಾಗೂ ಸ್ಥಾಪಿಸಿರುವ ತನಿಖಾ ಠಾಣೆಗಳಲ್ಲಿ ಗುರುವಾರ ಒಂದೇ ದಿನ ₹ 2.57 ಕೋಟಿ ನಗದು ಸೇರಿದಂತೆ ₹ 5.88 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ, ‘₹ 6.63 ಲಕ್ಷ ಮೌಲ್ಯದ ಉಚಿತ ಕೊಡುಗೆಗಳು, ₹ 2.34 ಕೋಟಿ ಮೌಲ್ಯದ 88,177 ಲೀಟರ್‌ ಮದ್ಯ, ₹ 89.87 ಲಕ್ಷ ಮೌಲ್ಯದ 139.45 ಕೆ.ಜಿ. ಮಾದಕ ವಸ್ತುಗಳು ಗುರುವಾರ ವಶಪಡಿಸಿಕೊಂಡಿರುವ ಸ್ವತ್ತುಗಳಲ್ಲಿ ಸೇರಿವೆ’ ಎಂದು ತಿಳಿಸಿದ್ದಾರೆ.

ಚುನಾವಣಾ ನೀತಿಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಒಟ್ಟು ₹ 292.06 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 2,226 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಬಕಾರಿ ಕಾಯ್ದೆ ಉಲ್ಲಂಘನೆ ಆರೋಪದಡಿ 28,127 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT