ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಬಾಂಡ್ ದೇಶದ ಇತಿಹಾಸದಲ್ಲೇ ದೊಡ್ಡ ಹಗರಣ: ಕಾಂಗ್ರೆಸ್‌

Published 15 ಮಾರ್ಚ್ 2024, 12:31 IST
Last Updated 15 ಮಾರ್ಚ್ 2024, 12:31 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ಬಾಂಡ್‌ ಭಾರತದ ಇತಿಹಾಸದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗವು ಸಾರ್ವಜನಿಕಗೊಳಿಸಿದ ಮರುದಿನವೇ ಕಾಂಗ್ರೆಸ್‌ನಿಂದ ಈ ಹೇಳಿಕೆ ಹೊರಬಿದ್ದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಬರೆದುಕೊಂಡಿದೆ.

‘ಚುನಾವಣಾ ಬಾಂಡ್’ ಎನ್ನುವುದು ಕೇಂದ್ರ ಸರ್ಕಾರದ ಕಿಕ್ ಬ್ಯಾಕ್ ಹಗರಣದ ಹೊಸ ಹೆಸರು ಎಂದು ಕಾಂಗ್ರೆಸ್‌ ಹೇಳಿದೆ.

‘ನಾ ಖಾವುಂಗಾ, ನಾ ಖಾನೆದುಂಗಾ‘ ಎನ್ನುವ ನರೇಂದ್ರ ಮೋದಿ ಅವರೇ, ಚುನಾವಣಾ ಬಾಂಡ್ ನಲ್ಲಿ ತಿಂದವರು ಯಾರು, ತಿನ್ನಿಸಿದವರು ಯಾರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಚುನಾವಣಾ ಬಾಂಡ್ ವಿಚಾರದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್‌ ಕಳ್ಳಾಟ ಆಡುತ್ತಿರುವುದೇಕೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT