ಬೆಂಗಳೂರು: ‘ರಾಜ್ಯದಾದ್ಯಂತ ಎಲ್ಲ ಶಿಕ್ಷಣ ಸಂಸ್ಥೆಗಳ ಸಮೀಪದಲ್ಲಿಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದೆ’ ಎಂದುಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹೈಕೋರ್ಟ್‌ಗೆ ತಿಳಿಸಿದೆ.

ಹಿಂದುಳಿದ ವರ್ಗಗಳವಿದ್ಯಾರ್ಥಿ ನಿಲಯಗಳಸ್ಥಿತಿಗತಿಕುರಿತಂತೆಹೈಕೋರ್ಟ್ಸ್ವಯಂಪ್ರೇರಿತವಾಗಿದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕೆಪಿಟಿಸಿಎಲ್ ಪರ ವಕೀಲ ಶ್ರೀರಂಗ ಅವರು, ‘ಹೈಕೋರ್ಟ್ ನಿರ್ದೇಶನದಂತೆ ಎಲ್ಲ ಎಸ್ಕಾಂಗಳು ಶಿಕ್ಷಣ ಸಂಸ್ಥೆಗಳ ಬಳಿಯ ವಿದ್ಯುತ್ ಮಾರ್ಗಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಈಗಾಗಲೇ ಆರಂಭಿಸಲಾಗಿದೆ. ಎಲ್ಲೆಲ್ಲಿ ತೆರವು ಕಾರ್ಯ ನಡೆಸಬೇಕು ಎಂಬುದನ್ನು ಗುರುತಿಸಲಾಗಿದ್ದು, ಕೆಲವೆಡೆ ಟೆಂಡರ್ ಕರೆದು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಇದೇ 9ರಂದು ನ್ಯಾಯಾಲಯಕ್ಕೆ ಪ್ರತ್ಯೇಕ ವರದಿ ಸಲ್ಲಿಸಿವೆ’ ಎಂದು ವಿವರಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಪ್ರಕರಣದ ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆಸಹಕರಿಸುವ ವಕೀಲರು) ಬಿ.ವಿ.ವಿದ್ಯುಲ್ಲತಾ ಅವರಿಗೆ, ’ಎಸ್ಕಾಂಗಳ ವರದಿ ಪರಿಶೀಲಿಸಿ ಅವುಗಳಲ್ಲಿ ಏನಾದರೂ ಆಕ್ಷೇಪಣೆಗಳಿದ್ದರೆ ಸಲ್ಲಿಸಿ’ ಎಂದು ಸೂಚಿಸಿ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿತು.

ತುಮಕೂರಿನಕರೀಕೆರೆಗ್ರಾಮದಲ್ಲಿಸ್ವಾತಂತ್ರ್ಯದಿನಾಚರಣೆಗೆಧ್ವಜಸ್ತಂಭಅಳವಡಿಸುವವೇಳೆಸಂಭವಿಸಿದವಿದ್ಯುತ್ಅವಘಡದಲ್ಲಿವಿದ್ಯಾರ್ಥಿಯೊಬ್ಬಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತಶಿಕ್ಷಣ ಸಂಸ್ಥೆಗಳಮೇಲೆಹಾದುಹೋಗಿರುವಎಲ್ಲವಿದ್ಯುತ್ತಂತಿಗಳನ್ನುತೆರವುಗೊಳಿಸಲುಹೈಕೋರ್ಟ್ ಈ ಹಿಂದೆಯೇ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.