ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ: 8 ಸಲ ಅಂಬಾರಿ ಹೊತ್ತಿದ್ದ ಅರ್ಜುನನ ದಾರುಣ ಸಾವು

Published 4 ಡಿಸೆಂಬರ್ 2023, 11:00 IST
Last Updated 4 ಡಿಸೆಂಬರ್ 2023, 12:22 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ ಕಾಡಾನೆ ಸೆರೆ, ರೆಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ.

ಸೋಮವಾರ ಮಧ್ಯಾಹ್ನ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಅರಿವಳಿಕೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಪುಂಡಾನೆಯೊಂದು ದಾಳಿ ಮಾಡಿದೆ. ನಾಲ್ಕು ಸಾಕಾನೆಗಳ ಜೊತೆಗೆ ಅದನ್ನು ಹಿಮ್ಮೆಟ್ಟಿಸಲು ಮಾವುತರು ಪ್ರಯತ್ನಿಸಿದರು.

ಮೂರು ಆನೆಗಳು ಹಿಂದೆ ಸರಿದಿದ್ದು, ಸಾಕಾನೆ ಅರ್ಜುನನ ಮೇಲೆ ಕಾಡಾನೆ ದಾಳಿ ನಡೆಸಿದೆ. ದಾಳಿ ತೀವ್ರವಾಗುತ್ತಿದ್ದಂತೆಯೇ ಅರ್ಜುನನ ಮಾವುತರು ಕೇಳಕ್ಕೆ ಇಳಿದು ಓಡಿ ಬಂದಿದ್ದಾರೆ. ಹೊಟ್ಟೆ ಭಾಗಕ್ಕೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಸಾಕಾನೆ ಅರ್ಜುನ ಮೃತಪಟ್ಟಿದೆ.

ಅರ್ಜುನ

ಅರ್ಜುನ

ಅಂಬಾರಿ ಹೊತ್ತಿದ್ದ ಅರ್ಜುನ: 2012 ರಿಂದ 2019 ರವರೆಗಿನ ಮೈಸೂರು ದಸರಾ ಉತ್ಸವದ ಒಟ್ಟು 8 ಬಾರಿ ಅರ್ಜುನ ಆನೆ ಅಂಬಾರಿ ಹೊತ್ತಿತ್ತು.

ಇದೀಗ ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಮೃತಪಟ್ಟಿದ್ದು, ಮಾವುತರು ಕಣ್ಣೀರಿಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT