ಹಾಸನ: ‘ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರದ ಬಗ್ಗೆ ತಜ್ಞರ ಸಮಿತಿ ವರದಿ ಬಂದಿದ್ದು, ಭದ್ರಾ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು 2 ಸಾವಿರ ಹೆಕ್ಟೇರ್ನಲ್ಲಿ ಆನೆಗಳ ವಿಹಾರ ಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡಲು ವಿಸ್ತೃತ ವರದಿ ತರಿಸಿಕೊಳ್ಳಲಾಗುತ್ತಿದೆ’ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘₹ 53 ಕೋಟಿ ಅನುದಾನ ಮಂಜೂರಾಗಿದ್ದು, 15 ದಿನದಲ್ಲಿ ಟೆಂಡರ್ ಕರೆದು, ಎರಡು ತಿಂಗಳೊಳಗೆ ಕಾಮಗಾರಿಗೆ ಶಂಕು
ಸ್ಥಾಪನೆ ಮಾಡ
ಲಾಗು ವುದು’ ಎಂದು ತಿಳಿಸಿದರು.

‘ಕಾಡಾನೆ ಸಮಸ್ಯೆಗೆ ಶೀಘ್ರ
ದಲ್ಲಿ ಶಾಶ್ವತ ಪರಿಹಾರ ಕಂಡು ಕೊಳ್ಳ
ಲಾಗುವುದು. ಈ ಸಂಬಂಧ ಚರ್ಚಿಸಲು ಮುಖ್ಯಮಂತ್ರಿಯವರು ಕರೆದಿದ್ದ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ’ ಎಂದು ತಿಳಿಸಿದರು.

‘ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಾರ್ಗದರ್ಶನದಲ್ಲಿ ಎಲ್ಲರನ್ನೂ ಜೊತೆಗೂಡಿಸಿಕೊಂಡು, ಕೊಟ್ಟ ಮಾತಿನಂತೆ ಉತ್ತಮ ಆಡಳಿತ ನೀಡಿದ್ದೇವೆ. ಇನ್ನೂ ಉತ್ತಮವಾಗಿ ಆಡಳಿತ ನೀಡಲಿದ್ದೇವೆ’ ಎಂದರು.

ಇದೇ ವೇಳೆ ಅವರು, ಬಿಕ್ಕೋಡು ಗ್ರಾಮದ ಸಸ್ಯಕ್ಷೇತ್ರ
ದಲ್ಲಿ ಆನೆ ಕಾರ್ಯಪಡೆ ಜಿಲ್ಲಾ ಕೇಂದ್ರ ಕಚೇರಿ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿದರು. ‘ಕಾಡಾನೆಗಳ ಮೇಲೆ 24x7 ಮೇಲ್ವಿಚಾರಣೆ ಮಾಡಲು, ಎಸಿಎಫ್, ಡಿಸಿಎಫ್, ಆರ್ಎಎಫ್ಒ ಗಳು ಸ್ಥಳದಲ್ಲೇ ಇರುವಂತೆ ಮಾಡಲು
₹ 40 ಲಕ್ಷ ವೆಚ್ಚದಲ್ಲಿ ಕಚೇರಿ ನಿರ್ಮಿಸಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.