ರಾಮನಗರ: ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಚಿಕ್ಕಗೊಂಡಹಳ್ಳಿ ಸಮೀಪದ ಕೆರೆಯಲ್ಲಿ ನೀರು ಕುಡಿ
ಯಲು ಬಂದ ಎರಡು ಕಾಡಾನೆಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದು, ಪ್ರಕರಣ ಶನಿವಾರ ಗೊತ್ತಾಗಿದೆ.

ಎರಡು-ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆನೆಗಳು ಬಲಿಯಾಗಿದ್ದು ಹೇಗೆ?: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಕೋಡಿಹಳ್ಳಿ ವನ್ಯಜೀವಿ ವಲಯಕ್ಕೆ ಸೇರಿರುವ ಈ ಅರಣ್ಯ ಪ್ರದೇಶದಲ್ಲಿ ಕೆರೆ ಇದೆ. ಇದರ ಮಧ್ಯೆ 11 ಕೆ.ವಿ. ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದು ಹೋಗಿವೆ.

ವಿದ್ಯುತ್ ತಂತಿಗಳು ಕೆರೆಯ ನೀರಿನಲ್ಲಿ ಮುಳುಗಿವೆ. ಇದರಿಂದಾಗಿ ನೀರಿನಲ್ಲಿ ವಿದ್ಯುತ್ ಪ್ರವಹಿಸಿದೆ. ನೀರಿನ ಸಂಪರ್ಕಕ್ಕೆ ಬಂದ ಕಾಡಾನೆಗಳು ವಿದ್ಯುತ್ ಶಾಕ್‌ನಿಂದಾಗಿ ಸಾವನ್ನಪ್ಪಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಸಿಸಿಎಫ್ ಅಜಯ್ ಮಿಶ್ರಾ, ಬನ್ನೇರುಘಟ್ಟ ಡಿಸಿಎಫ್ ಪ್ರಶಾಂತ್, ಎಸಿಎಫ್ ಪ್ರಶಾಂತ್ ಅವರನ್ನು ಒಳಗೊಂಡ ಅಧಿಕಾರಿಗಳ ತಂಡವುಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ಘಟನೆಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಕಾರಣವಾಗಿದ್ದು, ಅವರ ವಿರುದ್ಧ ವನ್ಯಜೀವಿ ಸಂರಕ್ಷಣೆ ಕಾಯ್ದೆಯ ಅಡಿ ಪ್ರಕರಣ ದಾಖಲಿಸುವುದಾಗಿಯೂ ಅಧಿಕಾರಿಗಳು ಪ್ರತಿಕ್ರಿಯಿಸಿದರು. ಎರಡೂ ಆನೆಗಳ ಕಳೇಬರಗಳು ಕೆರೆಯ ನಡುವೆ ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.