ಸಿದ್ದಾಪುರ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
15 ಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡು ಗ್ರಾಮದ ಕಾಫಿ ತೋಟಗಳಲ್ಲಿ ಅಲೆದಾಡುತ್ತಿವೆ. ಸೋಮವಾರ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕಿದ್ದಾರೆ. ಕಾಡಾನೆಗಳು ಕಾಫಿಗಿಡಗಳನ್ನು ತುಳಿದು ನಾಶಪಡಿಸುತ್ತಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.