ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಕ್ಕೆ ತರ್ತು ನೋಟಿಸ್ ಜಾರಿ

Last Updated 6 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಶಾಲಾ ಶುಲ್ಕ ನಿಯಂತ್ರಣ ಮತ್ತು ಡೊನೇಷನ್) ಅಧಿನಿಯಮಗಳು (ತಿದ್ದುಪಡಿ) 2016 ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಈ ಕುರಿತಂತೆ ‘ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ಜಾಗೃತಿ ವೇದಿಕೆ’ ಸೇರಿ ನಾಲ್ವರು ಸಲ್ಲಿಸಿರುವ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಅಧೀನ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.

ಆಕ್ಷೇಪಣೆ ಏನು?:

‘ಅಧಿನಿಯಮಗಳಿಗೆ ತರಲಾಗಿರುವ ತಿದ್ದುಪಡಿಯಲ್ಲಿ ಶಾಲೆಗಳ ಶುಲ್ಕವನ್ನು ಭೌಗೋಳಿಕವಾಗಿ ವಿಂಗಡಣೆ ಮಾಡಿ ಏರಿಸಲಾಗಿದೆ. ಈ ನಿರ್ಧಾರದ ಹಿಂದೆ ಖಾಸಗಿ ಶಾಲೆಗಳ ಲಾಬಿ ಇದೆ’ ಎಂಬುದು ಅರ್ಜಿದಾರರ ಆರೋಪ.

‘ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕವನ್ನು ಶೇ 70ರಷ್ಟು, ನಗರಸಭೆ ವ್ಯಾಪ್ತಿಯಲ್ಲಿ ಶೇ 80, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತುಪಡಿಸಿ ಉಳಿದ ಪಾಲಿಕೆಗಳಲ್ಲಿ ಶೇ 90 ಹಾಗೂ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಲ್ಲಿ ಶೇ 100ರಷ್ಟು ಪ್ರಮಾಣದಲ್ಲಿ ನಿಗದಿಪಡಿಸಲಾಗಿದೆ. ಇದು ಪಾಲಕರಿಗೆ ಹೆಚ್ಚಿನ ಹೊರೆಯಾಗಿ ಪರಿಣಮಿಸಲಿದೆ’ ಎಂದು ಆಕ್ಷೇಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT