ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಿ: ಸುಧಾಕರ್‌

Published 30 ಜೂನ್ 2023, 15:26 IST
Last Updated 30 ಜೂನ್ 2023, 15:26 IST
ಅಕ್ಷರ ಗಾತ್ರ

ಬೆಳಗಾವಿ: ‘ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಇಂದಿನ ಅಗತ್ಯಕ್ಕೆ ತಕ್ಕಂತೆ ಪಠ್ಯಕ್ರಮ ಬದಲಿಸುವ ಅಗತ್ಯವಿದೆ. ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಬೇಕಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್‌ ಕಲಿಕೆಗೆ ಹೆಚ್ಚಿನ ಅವಕಾಶ ಮಾಡಿಕೊಡಬೇಕು. ವಿದ್ಯಾರ್ಥಿಗಳು ಪದವೀಧರರಾಗುವ ಹೊತ್ತಿಗೆ, ಔದ್ಯೋಗಿಕ ಕ್ಷೇತ್ರ ಅಪೇಕ್ಷಿಸುವ ಕೌಶಲ ಬೆಳೆಸಿಕೊಂಡಿರಬೇಕು’ ಎಂದರು.

ಇದೇವೇಳೆ ವಿಟಿಯು ಮೆಂಟರಿಂಗ್ ಪೋರ್ಟಲ್ ಉದ್ಘಾಟಿಸಿದರು. ವಿಟಿಯು ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ವಿಟಿಯು ಹಣಕಾಸು ಅಧಿಕಾರಿ ಎಂ.ಎ.ಸಪ್ನಾ ಉಪಸ್ಥಿತರಿದ್ದರು. ಕುಲಸಚಿವ ಪ್ರೊ.ಬಿ.ಈ.ರಂಗಸ್ವಾಮಿ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಟಿ.ಎನ್.ಶ್ರೀನಿವಾಸ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT