ಕೋವಿಡ್-19 ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಜನ ಜಾಗೃತಿ ಮೂಡಿಸುವುದು ಲಾಕ್ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಮನೆ ಬಾಗಿಲಿಗೆ ವಿತರಣೆ, ಸೌಲಭ್ಯಗಳ ವಿತರಣೆ, ಮನೆ ಮನೆ ಭೇಟಿ ನೀಡಿ ಹೋಮ್ ಕ್ವಾರಂಟೈನ್ ಪರಿಶೀಲನೆ, ದೈನಂದಿನ ಮಾಹಿತಿ ಸಂಗ್ರಹ, ಸಾಂಸ್ಥಿಕ ಕ್ವಾರಂಟೈನ್ ನಿರ್ವಹಣೆ ಮೇಲ್ವಿಚಾರಣೆ ವಹಿಸುತ್ತಿದೆ. ಇದಲ್ಲದೆ, ಸ್ವಸಹಾಯ ಸಂಘಗಳು 8 ಲಕ್ಷ ಮಾಸ್ಕ್ ತಯಾರಿಸಿ ವಿತರಿಸುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯವಾಗಿರುವ ಕುರಿತು ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.