ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಟ್ಟು 44,608 ಅರಣ್ಯ ಒತ್ತುವರಿ ಪ್ರಕರಣಗಳು ದಾಖಲಾಗಿದ್ದು, ಇವುಗಳನ್ನು ಇತ್ಯರ್ಥಗೊಳಿಸಲು ಇಲಾಖೆಗೆ ಸಾಧ್ಯವಾಗಿಲ್ಲ.

ರಾಜ್ಯದ ಪ್ರಮುಖ ಅರಣ್ಯ ವೃತ್ತಗಳಾದ ಕೆನರಾ ವೃತ್ತ 18,517, ಚಿಕ್ಕಮಗಳೂರು ವೃತ್ತ 7,718, ಹಾಸನ ವೃತ್ತ, 1,458, ಮಂಗಳೂರು ವೃತ್ತ 2,892, ಶಿವಮೊಗ್ಗ ವೃತ್ತ 4,375, ಬೆಂಗಳೂರು ವೃತ್ತ, 4,688, ಮೈಸೂರು ವೃತ್ತದಲ್ಲಿ 1,029 ಒತ್ತುವರಿ ಪ್ರಕರಣಗಳು ದಾಖಲಾಗಿವೆ. ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಆಗಿಲ್ಲ ಎಂದು ಅರಣ್ಯ ಇಲಾಖೆ ಪ್ರಕಟಿಸಿರುವ 2023–24 ರ ವಾರ್ಷಿಕ ವರದಿ ತಿಳಿಸಿದೆ.

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಾದ್ಯಂತ ಒಟ್ಟು 1,385 ಅರಣ್ಯ ಒತ್ತುವರಿ ಪ್ರಕರಣಗಳು ದಾಖಲಾಗಿವೆ.

ಅರಣ್ಯ ಒತ್ತುವರಿಯನ್ನು ಆದ್ಯತೆಯ ಮೇಲೆ ಹಾಗೂ ಕಾಲಮಿತಿಯಲ್ಲಿ ತೆರವುಗೊಳಿಸಬೇಕು ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ 2002ರಲ್ಲೇ ಕಟ್ಟುನಿಟ್ಟಿನ ಆದೇಶ ಮಾಡಿದೆ. ಒತ್ತುವರಿ ತೆರವು ಪ್ರಕರಣಗಳನ್ನು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಿಸಿಎಫ್ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ಒಂದು ಘಟಕವನ್ನು ಪಿಸಿಸಿಎಫ್ ಕಚೇರಿಯಲ್ಲಿ ತೆರೆಯಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಸಮಿತಿ ರಚಿಸಬೇಕು. ಈ ಸಮಿತಿ ವರ್ಷಕ್ಕೆ ಎರಡು ಬಾರಿ ಸಭೆ ಸೇರಿ ಪರಾಮರ್ಶೆ ನಡೆಸಿ, ಒತ್ತುವರಿ ತೆರವುಗೊಳಿಸುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಅಂಶವೂ ಆದೇಶದಲ್ಲಿದೆ.

ಅಲ್ಲದೇ, ಅರಣ್ಯ ಒತ್ತುವರಿ ತಡೆಯಲು ವಿಫಲರಾಗುವ ಡಿಸಿಎಫ್, ಜಿಲ್ಲಾಧಿಕಾರಿ ಹಾಗೂ ಎಸ್ಪಿಯವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು 2004 ರಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಆದರೆ, ಈ ಆದೇಶಗಳು ಕೇವಲ ಕಡತದಲ್ಲಿ ಉಳಿದಿದೆ ಎಂದು ಅರಣ್ಯ ಇಲಾಖೆ ಮೂಲಗಳು ಹೇಳಿವೆ.

‘ಎಷ್ಟೋ ಒತ್ತುವರಿ ಪ್ರಕರಣಗಳು ದಾಖಲಾಗುವುದಿಲ್ಲ. ಪ್ರಭಾವಿಗಳ ಒತ್ತುವರಿ ಪ್ರಕರಣಗಳನ್ನು ಮುಟ್ಟುವ ಸಾಹಸಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹೋಗುವುದಿಲ್ಲ. ಹೀಗಾಗಿ ಕಡತಗಳಲ್ಲಿ ದಾಖಲಾಗುವ ಪ್ರಕರಣಗಳಿಗಿಂತಲೂ ಹೆಚ್ಚು ಪ್ರಕರಣಗಳು ಅಧಿಕಾರಿಗಳ ಗಮನಕ್ಕೆ ಬಂದರೂ, ಗೊತ್ತಿದ್ದೂ ಗೊತ್ತಿಲ್ಲದಂತೆ ಸುಮ್ಮನೆ ಉಳಿದುಬಿಡುತ್ತಾರೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಪರಿಸರ ತಜ್ಞರೊಬ್ಬರು ‘ಪ್ರಜಾವಾಣಿ’ಗೆ ವಿವರಿಸಿದರು.

ಅರಣ್ಯ ಒತ್ತುವರಿ ಪ್ರಕರಣಗಳನ್ನು ತಡೆಯಲು ಮತ್ತು ತೆರವುಗೊಳಿಸಲು ಅರಣ್ಯ ರಕ್ಷಕರಿಂದ ಹಿಡಿದು ಪಿಸಿಸಿಎಫ್ ವರೆಗೆ ಬಹುತೇಕ ಎಲ್ಲ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಫಲರಾಗುತ್ತಿದ್ದಾರೆ. ಇಂತಹವರ ವಿರುದ್ಧ ಯಾವುದೇ ಕ್ರಮ ತಗೆದುಕೊಳ್ಳಲಾಗುತ್ತಿಲ್ಲ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.