ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಶಾಸಕ ಭರತ್‌ ರೆಡ್ಡಿ ಮನೆ, ಕಚೇರಿಯಲ್ಲಿನ ಇ.ಡಿ ಶೋಧ ಅಂತ್ಯ

Published 12 ಫೆಬ್ರುವರಿ 2024, 4:06 IST
Last Updated 12 ಫೆಬ್ರುವರಿ 2024, 4:06 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ನಗರ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಅವರ ಮನೆ ಮತ್ತು ಕಚೇರಿಯಲ್ಲಿ ಶನಿವಾರದಿಂದ ನಡೆಯುತ್ತಿದ್ದ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ಶೋಧ ಭಾನುವಾರ ರಾತ್ರಿ ಅಂತ್ಯಗೊಂಡಿದೆ.

ಶನಿವಾರ ಮುಂಜಾನೆ 6.30ಕ್ಕೆ ಬಳ್ಳಾರಿಗೆ ಬಂದಿದ್ದ ಇ.ಡಿ ಅಧಿಕಾರಿಗಳ ತಂಡ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿತ್ತು.

ಗಾಂಧಿನಗರದಲ್ಲಿರುವ ಭರತ್‌ ರೆಡ್ಡಿ ಕಚೇರಿಯಲ್ಲಿ ಭಾನುವಾರ ರಾತ್ರಿ 11.30ರ ವರೆಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು, ನಂತರ ನಿರ್ಗಮಿಸಿದರು.

ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರ ತನಿಖೆಯ ಭಾಗವಾಗಿ ಭರತ್ ರೆಡ್ಡಿ ಮೇಲೆ ಇ.ಡಿ ದಾಳಿ ನಡೆಸಿರುವುದಾಗಿ ಉನ್ನತ ಮೂಲಗಳು ಮಾಹಿತಿ‌ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT