ಮಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಪರಿಷ್ಕರಣೆಗೆ ಮನವಿ ಮಾಡಿದ್ದು, ಸೆಪ್ಟೆಂಬರ್ ಎರಡನೇ ವಾರದಲ್ಲಿ ಸಭೆ ಕರೆದು ನಿರ್ಧರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳ ಶುಲ್ಕವನ್ನು ಪ್ರತಿ ವರ್ಷ ಪರಿಷ್ಕರಿಸಲಾಗುತ್ತಿದೆ. ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ಮೂರು ವರ್ಷಗಳಿಂದ ಪರಿಷ್ಕರಿಸಿಲ್ಲ ಎಂದರು.

ಹೊಸ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತ, ವಿದ್ಯಾರ್ಥಿ ಸ್ನೇಹಿಯಾಗಿದೆ. ವಿದ್ಯಾರ್ಥಿ ವಿರೋಧಿ ಒಂದೇ ಒಂದು ಅಂಶವನ್ನು ವಿರೋಧಿಸುವವರು ತೋರಿಸಲಿ ಎಂದು ಸವಾಲು ಹಾಕಿದರು. ಇದನ್ನು ತರಾತುರಿಯಲ್ಲಿ ಜಾರಿಗೊಳಿಸುತ್ತಿಲ್ಲ ಎಂದು ಹೇಳಿದರು.

ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರಿಗೆ ಕಾಲೇಜುಗಳಲ್ಲಿ ಭೌತಿಕ ತರಗತಿಗೆ ಹಾಜರಾಗಲು ಅವಕಾಶ ನೀಡ
ಲಾಗುವುದು. ಈಗಾಗಲೇ ರಾಜ್ಯದಲ್ಲಿ ಶೇ 86 ರಷ್ಟು ವಿದ್ಯಾರ್ಥಿಗಳಿಗೆ ಒಂದು ಡೋಸ್ ಲಸಿಕೆ ಹಾಕಲಾಗಿದೆ ಎಂದರು.

ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ವಿಶ್ವವಿದ್ಯಾಲಯ ಹಾಗೂ ಕಾಲೇಜು ಕ್ಯಾಂಪಸ್ನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಪಹರೆ ಹೆಚ್ಚಿಸುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.