ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲೂ ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಬೇಡಿಕೆ ಸಲ್ಲಿಸಿದ್ದು, ಶೇ 7ರಷ್ಟು ಹೆಚ್ಚಳಕ್ಕೆ ಸರ್ಕಾರ ಸಮ್ಮತಿಸುವ ಸಾಧ್ಯತೆ ಇದೆ.

ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ನೇತೃತ್ವದಲ್ಲಿ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ ನಂತರ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಶುಲ್ಕವನ್ನು 2024–25ನೇ ಶೈಕ್ಷಣಿಕ ಸಾಲಿನಲ್ಲಿ ಶೇ 10ರಷ್ಟು ಹೆಚ್ಚಳ ಮಾಡಲಾಗಿತ್ತು.

ಅಧ್ಯಾಪಕರ ವೇತನ ಹೆಚ್ಚಳ, ಕಾಲೇಜುಗಳ ಮೂಲಸೌಕರ್ಯ ಸುಧಾರಣೆ, ನಿರ್ವಹಣೆ ಮತ್ತು ಗುಣಮಟ್ಟವನ್ನು ಪರಿಗಣಿಸಿ 2025–26ನೇ ಸಾಲಿನಲ್ಲೂ ಶೇ 10ರಷ್ಟು ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂದು ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ ಮನವಿ ಸಲ್ಲಿಸಿದೆ.

‘ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ ಮನವಿ ಮಾಡಿದೆ. ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಶೇ 7ರಷ್ಟು ಹೆಚ್ಚಳ ಮಾಡಲು ಅವಕಾಶ ನೀಡುವುದಾಗಿ ಹೇಳಿದ್ದೇವೆ’ ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದರು.

ಪ್ರಸ್ತುತ ಸರ್ಕಾರಿ ಕೋಟಾದ ಸೀಟುಗಳಿಗೆ ಖಾಸಗಿ ಕಾಲೇಜುಗಳ ಶುಲ್ಕ ₹1.06 ಲಕ್ಷ, ಕಾಮೆಡ್–ಕೆ (ಟೈಪ್–1) ಶುಲ್ಕ ₹1.86 ಲಕ್ಷ ಹಾಗೂ (ಟೈಪ್–2) ₹2.61 ಲಕ್ಷ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.