2022-23ರ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಎಂಜಿನಿಯರಿಂಗ್ ಕಾಲೇಜುಗಳ ಸರ್ಕಾರಿ ಕೋಟಾದ ವಿದ್ಯಾರ್ಥಿಗಳ ಶುಲ್ಕ ₹38,200 ಇತ್ತು. ಅಲ್ಪಸಂಖ್ಯಾತರ ಕಾಲೇಜುಗಳಲ್ಲಿ (ಟೈಪ್-1) ₹91,796, ಅನುದಾನರಹಿತ ಕಾಲೇಜುಗಳಲ್ಲಿ (ಟೈಪ್-2) ₹98,984 ಮತ್ತು ಡೀಮ್ಡ್ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ₹91,796 ಇತ್ತು. ಪ್ರಸಕ್ತ ಸಾಲಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಹಿಂದಿನ ಮೊತ್ತಕ್ಕೆ ಶೇ 7ರಷ್ಟು ಹೆಚ್ಚುವರಿ ಶುಲ್ಕ ಪಾವತಿಸಬೇಕಿದೆ.