ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲಿಷ್‌ ಮಾಧ್ಯಮ ಪ್ರಾರಂಭದ ಪ್ರಕ್ರಿಯೆ ಶುರು

Last Updated 8 ಏಪ್ರಿಲ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: 2019–20ನೇ ಶೈಕ್ಷಣಿಕ ವರ್ಷದಿಂದ 1,000 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ತರಗತಿಗಳ ಆರಂಭ ಮಾಡುವ ಪ್ರಕ್ರಿಯೆಯನ್ನು ಶಿಕ್ಷಣ ಇಲಾಖೆ ಆರಂಭಿಸಿದೆ.

ಇಂಗ್ಲಿಷ್‌ ಮಾಧ್ಯಮ ಆರಂಭಿಸಲು ನಿರ್ಧರಿಸಿರುವ 947 ಶಾಲೆಗಳನ್ನು ಈಗಾಗಲೇ ಅಂತಿಮಗೊಳಿಸಿದೆ. ಅದರಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿನ ಸರಾಸರಿ ನಾಲ್ಕು ಶಾಲೆಗಳು ಅಂತಿಮ ಪಟ್ಟಿಯಲ್ಲಿವೆ.

ಬೆಂಗಳೂರು ನಗರದ ಜಿಲ್ಲೆಯಲ್ಲಿ ಹೆಚ್ಚು, ಅಂದರೆ 122 ಶಾಲೆಗಳಲ್ಲಿ ಮತ್ತು ಕೊಡಗಿನಲ್ಲಿ ಅತಿ ಕಡಿಮೆ, ಅಂದರೆ ಕೇವಲ 7 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪರಿಚಯಿಸಲಾಗುತ್ತಿದೆ.

ಮೊದಲ ಹಂತದಲ್ಲಿ ಪ್ರತಿ ಜಿಲ್ಲೆಯಿಂದ ತಲಾ ನಾಲ್ಕು ಎಂಆರ್‌ಪಿ (ಮಾಸ್ಟರ್‌ ರಿಸೋರ್ಸ್‌ ಪರ್ಸನ್‌)ಗಳಿಗೆ ಮೇ 2ರಿಂದ 10 ದಿನಗಳ ಕಾಲ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಲ್ಲಿ ಸಿದ್ಧತೆಗಳು ನಡೆದಿವೆ.

ಒಂದನೆ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ತರಗತಿ ಆರಂಭಕ್ಕೆ ಸಾಹಿತ್ಯ ವಲಯ ಸೇರಿದಂತೆ, ಹಲವಾರು ಸಂಘ–ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT