ಬೆಂಗಳೂರು: ರಾಜ್ಯದಲ್ಲಿನ 100 ಉರ್ದು ಶಾಲೆಗಳಲ್ಲಿ 2026–27ನೇ ಸಾಲಿನಿಂದ ಇಂಗ್ಲಿಷ್ ಮಾಧ್ಯಮ ಆರಂಭಿಸಲಾಗುತ್ತಿದೆ.

ಪೋಷಕರ ಬೇಡಿಕೆಯಂತೆ ಉರ್ದು ಮಾಧ್ಯಮ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣವನ್ನು ಆರಂಭಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಸ್ತಾವ ಸಲ್ಲಿಸಿದ್ದು, ಅದಕ್ಕಾಗಿ ₹100 ಕೋಟಿ ನೆರವು ನೀಡಲು ಮುಂದಾಗಿದೆ. ಈ ಎಲ್ಲ ಶಾಲೆಗಳನ್ನೂ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಿ, ಪೂರ್ವ ಪ್ರಾಥಮಿಕ ಶಿಕ್ಷಣದಿಂದ 12ನೇ ತರಗತಿಯವರೆಗೂ ದ್ವಿಭಾಷಾ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ.

‘ಉರ್ದು ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದ್ದು, ಪ್ರಸ್ತುತ ಇರುವ 4,000ಕ್ಕೂ ಹೆಚ್ಚು ಉರ್ದು ಶಾಲೆಗಳಲ್ಲಿ ಶೇ 25ಕ್ಕೂ ಹೆಚ್ಚು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 10ರ ಒಳಗಿದೆ. ಹೆಚ್ಚಿನ ಪೋಷಕರು ಇಂಗ್ಲಿಷ್ ಮಾಧ್ಯಮಕ್ಕೆ ಮಕ್ಕಳನ್ನು ಸೇರಿಸಲು ಆಸಕ್ತಿ ತೋರುತ್ತಿದ್ದಾರೆ. ಹಾಗಾಗಿ, 100 ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣಕ್ಕೆ ಅವಕಾಶ ನೀಡಬೇಕು’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೋರಿದೆ.

ರಾಜ್ಯದಲ್ಲಿ ಈಗಾಗಲೇ 400 ಉರ್ದು ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ಅವಕಾಶ ನೀಡಲಾಗಿದೆ. ಹೊಸ ಸೇರ್ಪಡೆಯಿಂದ ಈ ಸಂಖ್ಯೆ 500ಕ್ಕೆ ಏರಿಕೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.