ನವದೆಹಲಿ: ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ ಐದು ಹಾಗೂ ಆರನೇ ಘಟಕಗಳಿಗೆ ನೀಡಿರುವ ಪರಿಸರ ಅನುಮೋದನೆಯನ್ನು ಅಮಾನತುಗೊಳಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ದಕ್ಷಿಣ ವಲಯ ಪೀಠ ಆದೇಶ ಹೊರಡಿಸಿದೆ.

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತದೆ ಎಂದು ಆರೋಪಿಸಿ ‘ಕೈಗಾ ಅಣು ವಿದ್ಯುತ್ ಸ್ಥಾವರದ ಐದು ಹಾಗೂ ಆರನೇ ಘಟಕ ವಿರೋಧಿ ಹೋರಾಟ ಸಮಿತಿ’ಯು ಎನ್‌ಜಿಟಿ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಕೆ.ರಾಮಕೃಷ್ಣನ್ ಹಾಗೂ ಡಾ.ಸತ್ಯಗೋಪಾಲ್ ಕೊರ್ಲಪಾಟಿ ಅವರನ್ನು ಒಳಗೊಂಡ ಪೀಠ ಈ ಆದೇಶಿಸಿದೆ.

ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳು ನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಪ್ರದೇಶದ 56,825 ಚದರ ಕಿ.ಮೀ ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿದೆ. ಕರ್ನಾಟಕದಲ್ಲೇ 20,668 ಚದರ ಕಿ.ಮೀ. ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮವೆಂದು ಗುರುತಿಸಲಾಗಿದೆ. ಕೈಗಾ ಗ್ರಾಮ ಸಹ ಪರಿಸರ ಸೂಕ್ಷ್ಮ ಪ್ರದೇಶದೊಳಗೆ ಇದೆ ಎಂಬುದು ಅರ್ಜಿದಾರರ ವಾದ. ಈ ಎರಡು ಘಟಕಗಳ ಪ್ರದೇಶ ಪರಿಸರ ಸೂಕ್ಷ್ಮ ಪ್ರದೇಶದೊಳಗೆ ಬರುತ್ತದೆಯೇ ಎಂಬುದನ್ನು ಸಚಿವಾಲಯ ಪರಿಶೀಲನೆ ನಡೆಸಬೇಕು. ಜತೆಗೆ, ಯೋಜನೆ ಅನುಷ್ಠಾನದಿಂದ ಕೈಗಾ ಗ್ರಾಮದ ಮೇಲೆ ಏನಾದರೂ ಪರಿಣಾಮ ಆಗಲಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.

ಘಟಕಗಳ ಆರಂಭದಿಂದ ಕಾಳಿ ನದಿ, ಅದರ ಅಣೆಕಟ್ಟಿನ ಮೇಲಾಗುವ ಪರಿಣಾಮ, ನೀರಿನ ಲಭ್ಯತೆ, ನದಿ ತೀರದ ಜನರ ಮೇಲಾಗುವ ಪರಿಣಾಮಗಳ ಕುರಿತ ಅಧ್ಯಯನವರದಿಯನ್ನು ಸಲ್ಲಿಸಬೇಕು. ಈ ಯೋಜನೆಯಿಂದ ಪರಿಸರ ಸೂಕ್ಷ್ಮ ಪ್ರದೇಶದ ಮೇಲಾಗುವ ತೊಂದರೆ, ಘಟಕಗಳಿಂದ ಬರುವ ಅಣು ವಿಕಿರಣಗಳಿಂದ ಜನರ ಆರೋಗ್ಯದ ಮೇಲಾಗುವ ಪರಿಣಾಮದ ಬಗ್ಗೆಯೂ ಅಧ್ಯಯನ ವರದಿ ಸಲ್ಲಿಸಬೇಕು. ಈ ಎಲ್ಲ ಪ್ರಕ್ರಿಯೆಗಳನ್ನು ಆರು ತಿಂಗಳ ಒಳಗೆ ಪೂರ್ಣಗೊಳಿಸಬೇಕು. ಬಳಿಕ ಒಂದು ತಿಂಗಳಲ್ಲಿ ಪರಿಸರ ಅನುಮೋದನೆ ನೀಡಬೇಕೇ ಬೇಡವೇ ಎಂಬ ಬಗ್ಗೆ ಕೇಂದ್ರ ಪರಿಸರ ಸಚಿವಾಲಯ ತೀರ್ಮಾ ನಿಸಬೇಕು ಎಂದೂ ಪೀಠ ತಿಳಿಸಿದೆ.

ಪರಿಸರ ಸೂಕ್ಷ್ಮ ಪ್ರದೇಶದ ಅಧಿ ಸೂಚನೆ ಕರಡು ಹಂತದಲ್ಲಿದ್ದು, ಈ ಬಗ್ಗೆ ಕೇಂದ್ರ ತೀರ್ಮಾನ ತೆಗೆದುಕೊಂಡಿಲ್ಲ. ಕೈಗಾದಲ್ಲಿ 1992ರಿಂದ ಘಟಕ ಇದೆ. ಈಗ ಯೋಜನೆಯನ್ನು ವಿಸ್ತರಣೆ ಮಾಡಲಾಗುತ್ತಿದೆ. ಎಲ್ಲ ಆಯಾಮ ಗಳನ್ನು ಪರಿಶೀಲಿಸಿ ಪರಿಸರ ಸಚಿವಾಲಯ ಪರಿಸರ ಅನುಮೋದನೆ ನೀಡಿದೆ ಎಂದು ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾದ ಪರ ವಕೀಲರು ವಾದಿಸಿದರು.

ಒಟ್ಟು ₹ 21 ಸಾವಿರ ಕೋಟಿ ವೆಚ್ಚದ ಯೋಜನೆ ಇದಾಗಿದೆ. ಇಲ್ಲಿ ತಲಾ700ಮೆಗಾವಾಟ್ಸಾಮರ್ಥ್ಯದ ಎರಡು ಘಟಕಗಳ ಸ್ಥಾಪನೆಗೆ ಅಣುಶಕ್ತಿ ನಿಯಂತ್ರಣ ಮಂಡಳಿಯು ಅನುಮತಿ ನೀಡಿದೆ. ಕೇಂದ್ರ ಸಚಿವ ಸಂಪುಟವು 2017ರಲ್ಲೇ ಅನುಮೋದಿಸಿದೆ. ಈಘಟಕಗಳನಿರ್ಮಾಣ ಪೂರ್ಣಗೊಂಡ ಬಳಿಕ ಕೈಗಾದಲ್ಲಿ ಒಟ್ಟು 2,280ಮೆಗಾವಾಟ್ವಿದ್ಯುತ್ ಉತ್ಪಾದನೆಯಾಗಲಿದೆ. ಪ್ರಸ್ತುತ ತಲಾ 220ಮೆಗಾವಾಟ್ಸಾಮರ್ಥ್ಯದ ನಾಲ್ಕು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, 880ಮೆಗಾವಾಟ್ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.