ಬೆಂಗಳೂರು: ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಕಷ್ಟು ಲೋಪಗಳು, ಮುದ್ರಣ ದೋಷಗಳು ಇದ್ದ ಬಗ್ಗೆ ದೂರುಗಳು ಕೇಳಿ ಬಂದಿವೆ.

ಇತ್ತೀಚೆಗಷ್ಟೇ ಮಧ್ಯವಾರ್ಷಿಕ ಪರೀಕ್ಷೆಗಳು ಪೂರ್ಣಗೊಂಡಿದ್ದವು. ವಿವಿಧ ವಿಷಯಗಳಪ್ರಶ್ನೆ ಪತ್ರಿಕೆಗಳಲ್ಲಿ ಪ್ರಶ್ನೆಗಳನ್ನೇ ತಪ್ಪಾಗಿ ಕೇಳಲಾಗಿದೆ. ಕೆಲವು ಪ್ರಶ್ನೆಗಳು ಪುನರಾವರ್ತನೆ ಆಗಿವೆ. ಲೆಕ್ಕಶಾಸ್ತ್ರ, ಗಣಿತ, ರಸಾಯನ ವಿಜ್ಞಾನ, ಇಂಗ್ಲಿಷ್ ಸೇರಿದಂತೆ ಹಲವು ಪ್ರಶ್ನೆ ಪತ್ರಿಕೆಗಳಲ್ಲಿ ಲೋಪಗಳು ಆಗಿವೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಈ ಬಾರಿ ಪದವಿಪೂರ್ವ ಶಿಕ್ಷಣ ಇಲಾಖೆಯೇ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸಿ, ಪರೀಕ್ಷೆಗಳನ್ನು ನಡೆಸಿದೆ. ಪ್ರತಿ ವರ್ಷ ಮಧ್ಯ ವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ಪ್ರಾಂಶುಪಾಲರ ಸಂಘದಿಂದ ಜಿಲ್ಲಾ ಮಟ್ಟದಲ್ಲೇ ಮುದ್ರಿಸಿ, ಪರೀಕ್ಷೆ ನಡೆಸಲಾಗುತ್ತಿತ್ತು.

ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ ಪ್ರಶ್ನೆ ಪತ್ರಿಕೆಗಳಲ್ಲಿ ಆಗಿರುವ ಲೋಪಗಳನ್ನು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಇಲಾಖೆ ನಿರ್ದೇಶಕರ ಗಮನಕ್ಕೆ ತಂದಿದ್ದಾರೆ.

‘ಯಾವ ಕಾರಣಕ್ಕೆ ದೋಷಗಳು ಆಗಿವೆ ಎಂಬ ಬಗ್ಗೆ ನಿರ್ದೇಶಕರಿಂದ ಮಾಹಿತಿ ಕೇಳಿದ್ದೇನೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.