ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಂಚಿನ ಗ್ರಾಮಗಳಿಗೆ ಹಗಲಿನಲ್ಲಿ ತ್ರೀ ಫೇಸ್‌ ವಿದ್ಯುತ್‌: ಸಿಎಂಗೆ ಖಂಡ್ರೆ ಮನವಿ

Published 13 ನವೆಂಬರ್ 2023, 14:35 IST
Last Updated 13 ನವೆಂಬರ್ 2023, 14:35 IST
ಅಕ್ಷರ ಗಾತ್ರ

ಬೆಂಗಳೂರು: ವನ್ಯಜೀವಿ–ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ಬದಲು ಹಗಲು ಹೊತ್ತಿನಲ್ಲಿ ಮಾತ್ರ ತ್ರೀಫೇಸ್‌ ವಿದ್ಯುತ್‌ ಒದಗಿಸುವಂತೆ ಮುಖ್ಯಮಂತ್ರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಖಂಡ್ರೆ, ರಾಜ್ಯದ ಹಲವು ಕಡೆಗಳಲ್ಲಿ ಕಾಡಿನಂಚಿನ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿ ಹಲವು ಕಾಡುಪ್ರಾಣಿಗಳು ಬರುತ್ತಿವೆ. ರಾತ್ರಿ ವೇಳೆ ತ್ರೀಫೇಸ್‌ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಜೀವಹಾನಿಗೆ ಕಾರಣವಾಗುತ್ತಿದೆ ಎಂದಿದ್ದಾರೆ.

ರಾತ್ರಿಯ ವೇಳೆ ತ್ರೀಫೇಸ್‌ ವಿದ್ಯುತ್‌ ಪೂರೈಕೆ ಮಾಡಿದರೆ ರೈತರು ಪಂಪ್‌ಸೆಟ್‌ ಮೋಟರ್‌ ಆನ್‌ ಮಾಡಲು ಮತ್ತು ಆಫ್‌ ಮಾಡಲು ರಾತ್ರಿಯ ವೇಳೆ ಸಂಚರಿಸುವ ಕಾರಣ ಸಂಘರ್ಷ ಹೆಚ್ಚುತ್ತದೆ. ಹೀಗಾಗಿ ಬೆಳಗಿನ ಹೊತ್ತು ತ್ರೀಫೇಸ್‌ ವಿದ್ಯುತ್‌ ಪೂರೈಸುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಅವರು ತಿಳಿಸಿದ್ದಾರೆ.

ಆದ್ದರಿಂದ, ಈ ಕುರಿತು ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರಿಗೂ ಖಂಡ್ರೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT