ಮಂಗಳೂರು: ‘ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮುಖಂಡರ ಬೆಂಬಲಿಗರು ಹೇಳಿಕೆಗಳನ್ನು ನೀಡುತ್ತಾರೆಯೇ ವಿನಾ ಸಂಪುಟ ವಿಸ್ತರಣೆ ಬಗ್ಗೆ ನಮ್ಮಲ್ಲಿ ಗೊಂದಲವಿಲ್ಲ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಮಂಗಳೂರಿನಲ್ಲಿ ನಡೆದ ‘ಗೇರು ಮೇಳ’ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಪುಟ ವಿಸ್ತರಣೆಯು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು. ಮಾಡಬಹುದು ಅಥವಾ ಮಾಡದೆಯೂ ಇರಬಹುದು. ಆ ಬಗ್ಗೆ ಏನೇ ನಿರ್ಧಾರ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧ. ಯಾವ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ’ ಎಂದರು.

‘ಮೂರು ವರ್ಷ ಉತ್ತಮ ಆಡಳಿತ ನೀಡಿದ್ದೇವೆ. ಮುಂದೆಯೂ ನೀಡುತ್ತೇವೆ. ಜನಪರ ಆಡಳಿತ ನೀಡಿರುವುದರಿಂದಲೇ ಉಪ ಚುನಾವಣೆಗಳಲ್ಲಿ ಗೆದ್ದಿದ್ದೇವೆ’ ಎಂದರು.

‘ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ ಸ್ಥಳಾಂತರ ಪ್ರಕ್ರಿಯೆ ಹಂತಹಂತವಾಗಿ ಪೂರ್ಣಗೊಳಿಸಲಾಗುವುದು. ಅರಣ್ಯದೊಳಗಿನ ಜನರ ಸ್ಥಳಾಂತರದ ಮೂಲಕ ಅರಣ್ಯ ಪ್ರದೇಶ ವಿಸ್ತರಣೆ, ಸಂರಕ್ಷಣೆಗೆ ಸರ್ಕಾರ ಕ್ರಮ ವಹಿಸಿದೆ. ಕುದುರೆಮುಖ ಅರಣ್ಯದೊಳಗೆ 1,300 ಕುಟುಂಬಗಳಿದ್ದವು. ಅವುಗಳಲ್ಲಿ 350 ಕುಟುಂಬಗಳಿಗೆ ಪರಿಹಾರ ನೀಡಿ ಸ್ಥಳಾಂತರಿಸಲಾಗಿದೆ. ಇನ್ನೂ 300 ಕುಟುಂಬಗಳು ಸ್ವ ಇಚ್ಛೆಯಿಂದ ಸ್ಥಳಾಂತರಗೊಳ್ಳಲು ಅರ್ಜಿ ಸಲ್ಲಿಸಿದ್ದು, ಹಂತ ಹಂತವಾಗಿ ಪುನರ್ವಸತಿ ಯೋಜನೆ ಜಾರಿಗೆ ತರಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.