ಬೆಂಗಳೂರು: ‘ರಾಜ್ಯದಲ್ಲಿ ಶೀಘ್ರ ಎಥೆನಾಲ್ ನೀತಿ ಜಾರಿಗೊಳಿಸಲಾಗು ವುದು. ಒಂದೂವರೆ ವರ್ಷದಲ್ಲಿ ರಾಜ್ಯ ದಲ್ಲಿಇಥೆನಾಲ್ ಉತ್ಪಾದನೆಯನ್ನು ಶೇ 20ರಷ್ಟು ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಮತ್ತು ’ಬಿಕ್ವೆಸ್ಟ್ಕನ್ಸಲ್ಟೆನ್ಸಿಮತ್ತು ಎಂಜಿನಿಯರಿಂಗ್ ಕಂಪನಿ’ ಸಹಯೋಗದಲ್ಲಿ ‘ಕರ್ನಾಟಕ ದಲ್ಲಿ ಎಥೆನಾಲ್ ಉತ್ಪಾದನೆ: ನೀತಿ ಗಳು, ಆವಿಷ್ಕಾರಗಳು ಮತ್ತು ಸ್ಥಿರತೆ’ ವಿಷಯದ ಕುರಿತು ಶುಕ್ರವಾರ ನಡೆದ ವಿಚಾರ ಸಂಕಿರಣದಲ್ಲಿ ಅವರು ಈ ವಿಷಯ ತಿಳಿಸಿದರು.

‘ರಾಜ್ಯದಲ್ಲಿ ಎಥೆನಾಲ್ ಉತ್ಪಾದನೆ ಮತ್ತು ಬಳಕೆಯಲ್ಲಿ ಕ್ರಾಂತಿಯಾಗುತ್ತಿದೆ. ಈಗಾಗಲೇ ಪೆಟ್ರೋಲ್‌ನಲ್ಲಿ
ಶೇ 10ರಷ್ಟು ಎಥೆನಾಲ್ ಮಿಶ್ರಣದ ಗುರಿ ಸಾಧಿಸಲಾಗಿದೆ’ ಎಂದು ವಿವರಿಸಿದರು.

‘ರಾಜ್ಯದ 32 ಸಕ್ಕರೆ ಕಾರ್ಖಾನೆ ಗಳಲ್ಲಿ ಎಥೆನಾಲ್ ಉತ್ಪಾದಿಸಲಾಗು ತ್ತಿದೆ. ಇನ್ನೂ 60 ಸಕ್ಕರೆ ಕಾರ್ಖಾನೆ ಗಳು ಅನುಮತಿ ಪಡೆಯುವ ಹಂತದಲ್ಲಿವೆ.ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಎಥೆನಾಲ್ ಉತ್ಪಾದನೆಗೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುವುದು. ಕೇವಲ ಕಬ್ಬಿನಿಂದ ಮಾತ್ರವಲ್ಲ, ಭತ್ತ, ಜೋಳ ಹಾಗೂ ಗೋಧಿಯ ಹೊಟ್ಟಿನಿಂದಲೂ ಎಥೆನಾಲ್ ತಯಾರಿಸಬಹುದಾಗಿದೆ. ಇದರಿಂದ, ಮುಂಬರುವ ದಿನಗಳಲ್ಲಿ ದೇಶದಲ್ಲೇ ಅತಿ ಹೆಚ್ಚು ಎಥೆನಾಲ್ ಕರ್ನಾಟಕದಲ್ಲಿ ಉತ್ಪಾದನೆಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಸದ್ಯ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಹಸಿರು ಇಂಧನ ಪ್ರಾಮುಖ್ಯತೆ ಪಡೆಯುತ್ತಿದೆ. ದೇಶದ ಶೇ 43ರಷ್ಟು ನವೀಕರಿಸಬಹುದಾದ ಇಂಧನ ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ. ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದಿಸುವುದು ಸೇರಿದಂತೆ ಹಸಿರು ಇಂಧನ ಉತ್ಪಾದನೆಗೆಮೂರು ದೊಡ್ಡ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು,1.30 ಲಕ್ಷ ಕೋಟಿಯಷ್ಟು ಬಂಡವಾಳ ಕರ್ನಾಟಕದಲ್ಲಿ ಹೂಡಿಕೆ ಯಾಗಲಿದೆ’ ಎಂದರು.

ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಮಾತನಾಡಿ, ‘ದೇಶದಲ್ಲಿ 2021-22ರಲ್ಲಿ 800
ಕೋಟಿ ಲೀಟರ್ ಎಥೆನಾಲ್ ಉತ್ಪಾದನೆಯಾಗಿದೆ. ಮುಂದಿನ ವರ್ಷ ಇದು ಒಂದು ಸಾವಿರ ಕೋಟಿ ಲೀಟರ್ ತಲುಪಲಿದೆ. ಈ ಗುರಿ ಸಾಧನೆಯಿಂದ ₹30 ಸಾವಿರ ಕೋಟಿ ವಿದೇಶಿ ವಿನಿಮಯ ಉಳಿತಾಯವಾಗಲಿದೆ’ ಎಂದರು.

‘ಕಬ್ಬಿನ ಜ್ಯೂಸ್ ಅಥವಾ ಸಿರಪ್ ನಿಂದ ಮಾತ್ರವಲ್ಲ; ಕಬ್ಬಿನ ಸಿಪ್ಪೆ ಯಿಂದಲೂ ಎಥೆನಾಲ್ ಉತ್ಪಾದನೆ ಶುರುವಾಗಲಿದೆ. ಈಗಾಗಲೇ ಶೆಲ್ ಕಂಪೆನಿಯು ಹತ್ತು ಟನ್ ಎಥೆನಾಲ್ ನಿತ್ಯ ಉತ್ಪಾದಿಸುತ್ತಿದೆ’ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.