ಬೆಂಗಳೂರು: ‘ರಾಜ್ಯದಲ್ಲಿ ಎಲ್ಲ ಸರ್ಕಾರಿ ಕೆಲಸಗಳಿಗೂ ರೇಟ್ ಫಿಕ್ಸ್ ಆಗಿದೆ. ಸರ್ಕಾರದ ಪ್ರತಿ ಸಹಿಯೂ ಮಾರಾಟಕ್ಕೆ ಇದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘60 ಪರ್ಸಂಟೇಜ್ ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಕೇಳುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು, ಗುತ್ತಿಗೆದಾರರೇ ಈ ಆರೋಪ ಮಾಡುತ್ತಿದ್ದಾರೆ. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಲಿ’ ಎಂದರು.

‘ಸಿದ್ದರಾಮಯ್ಯ ಮಹಾನ್ ನಾಯಕರು. ಪೇಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಜನರ ಮುಂದೆ ಯಾವ ದಾಖಲೆ ಇಟ್ಟಿದ್ದಾರೆ? ಕೆಂಪಣ್ಣ ಹೇಳಿದರು, ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಕೆಂಪಣ್ಣ ಅವರಿಂದ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಕಮಿಷನ್ ಕೇಳದೇ ಇದ್ದರೆ ಈಗ ಗುತ್ತಿಗೆದಾರರು ಏಕೆ ಆರೋಪ ಮಾಡುತ್ತಿದ್ದರು’ ಎಂದು ಪ್ರಶ್ನಿಸಿದರು.

‘ಮಗ ಸೋತಿರುವುದಕ್ಕೆ ಹತಾಶನಾಗಿ ನಾನು ಈ ಆರೋಪ ಮಾಡುತ್ತಿದ್ದೇನೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅದು ಬಿಡಿ , ನಿಮ್ಮ ಕಂದಾಯ ಇಲಾಖೆಯಲ್ಲಿ ಪಡೆಯುತ್ತಿರುವ ಕಮಿಷನ್ ಬಗ್ಗೆ ಮಾತನಾಡಿ’ ಎಂದು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸವಾಲು ಹಾಕಿದರು.

‘ಬೆಂಗಳೂರು ಎಸಿ ಹುದ್ದೆಗೆ ಎಷ್ಟು ದುಡ್ಡು ತೆಗೆದುಕೊಳ್ಳುತ್ತಿದ್ದೀರಿ, ಆ ಹಣ ಯಾರಿಗೆ ಹೋಗುತ್ತಿದೆ, ಏನೆಲ್ಲಾ ದಂದೆ ನಡೆಯುತ್ತಿದೆ ಎಂಬುದರ ಮಾಹಿತಿ ನನಗಿದೆ’ ಎಂದರು.

ದಲಿತ ಶಾಸಕರ ಡಿನ್ನರ್ ಪಾರ್ಟಿಯ ಬಗ್ಗೆ ಕೇಳಿದ ಪ್ರಶ್ನೆಗೆ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ಡಿನ್ನರ್ ಪಾರ್ಟಿಯಲ್ಲಿ ಚರ್ಚೆಮಾಡುತ್ತಾರಂತೆ. ಹಾಗಿದ್ದಲ್ಲಿ ಸಚಿವ ಸಂಪುಟ ಸಭೆ ಏತಕ್ಕೆ ಬೇಕು’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.