ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 5ರಿಂದ ರಾಜ್ಯದಲ್ಲಿ ಪ್ರತಿ ಭಾನುವಾರ ಲಾಕ್‌ಡೌನ್‌, ಕರ್ಫ್ಯೂ ಅವಧಿ ವಿಸ್ತರಣೆ

Last Updated 27 ಜೂನ್ 2020, 14:36 IST
ಅಕ್ಷರ ಗಾತ್ರ

ಬೆಂಗಳೂರು:ಕೊರೊನಾ ವೈರಸ್‌ ನಿಯಂತ್ರಣದ ಕುರಿತು ಚರ್ಚಿಸಲು ಇಂದುಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ಮಹತ್ತರ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಜುಲೈ 5ರಿಂದ ಭಾನುವಾರ ಲಾಕ್‌ಡೌನ್‌, ಕರ್ಫ್ಯೂ ಅವಧಿ ವಿಸ್ತರಣೆ ಸೇರಿದಂತೆ ಹಲವು ಕ್ರಮಗಳಿಗೆ ಸರ್ಕಾರ ಮುಂದಾಗಿದೆ.

  1. ಜುಲೈ 5ರಿಂದಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ.
  2. ಜುಲೈ 10ನೇ ತಾರಿಖಿನಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಲು ತೀರ್ಮಾನಿಸಲಾಯಿತು.
  3. ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಈಗಾಗಲೇ ಇರುವ ಕರ್ಫ್ಯೂ ಅವಧಿಯ ಬದಲಾಗಿ ರಾತ್ರಿ 8.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಕರ್ಫ್ಯೂಅವಧಿಯನ್ನು ಬದಲಾಯಿಸಲು ತೀರ್ಮಾನಿಸಲಾಯಿತು.
  4. ಬೆಂಗಳೂರಿನಲ್ಲಿರುವ ಬೃಹತ್ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳಲ್ಲಿ ಆಗುವ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಹೆಚ್ಚಿನ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಲಾಗಿದೆ.
  5. ಕೋವಿಡ್-19 ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು (ಸೆಂಟ್ರಲೈಜ್ ಬೆಡ್ ಅಲೋಕೇಷನ್ ಸಿಸ್ಟಮ್) ತಂತ್ರಾಂಶದ ಮೂಲಕ ಜಾರಿಗೊಳಿಸಲಾಗುವುದು.
  6. ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್ ಸಂಖ್ಯೆಗಳನ್ನು 250ಕ್ಕೆ ಹೆಚ್ಚಿಸಲು ಮತ್ತು ಕೋವಿಡ್‍ನಿಂದ ಮೃತರಾದ ದೇಹಗಳನ್ನು ಸಾಗಿಸಲು ಪ್ರತ್ಯೇಕ ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಅಂಬುಲೆನ್ಸ್ ಇರುವ ಸ್ಥಳವನ್ನು ಗುರುತಿಸಲು ಮತ್ತು ಅವುಗಳ ಸರಳ ಚಲನವಲನಗಳ ಸಲುವಾಗಿ ಪೊಲೀಸ್ ಕಂಟ್ರೋಲ್ ರೂಂ ವೈರ್‍ಲೆಸ್ ಸೇವೆಯನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ.
  7. ಕೋವಿಡ್-19 ರ ನಿಯಂತ್ರಣದಲ್ಲಿ ಕೆಲಸ ಮಾಡುವ ಎಲ್ಲಾ ನೋಡಲ್ ಅಧಿಕಾರಿಗಳ ವಿವರಗಳನ್ನು ಪತ್ರಿಕೆಗಳ ಜಾಹೀರಾತು ಮುಖಾಂತರ ಸಾರ್ವಜನಿಕರಿಗೆ ಪ್ರಚುರಪಡಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
  8. ಬಿ.ಬಿ.ಎಂ.ಪಿ ಕೇಂದ್ರ ಕಚೇರಿ ಹಾಗೂ ಆಯುಕ್ತರ ಮೇಲೆ ಇರುವ ಕೆಲಸದ ಹೊರೆಯನ್ನು ಕಡಿಮೆಗೊಳಿಸಲು ಬಿ.ಬಿ.ಎಂ.ಪಿ ಯಲ್ಲಿನ 08 ವಲಯಗಳ ಜಂಟಿ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸಗಳನ್ನು ನೀಡಲು ಮತ್ತು ಅವರ ಜೊತೆಗೆ ಕೆಲಸ ಮಾಡಲು ಕೆ.ಎ.ಎಸ್ ಅಧಿಕಾರಿಗಳನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ.
  9. ವೈದ್ಯರಕೊರತೆಯನ್ನು ನೀಗಿಸಲು ಕಾರ್ಮಿಕ ಇಲಾಖೆಯಿಂದ ನೇಮಕವಾಗಿರುವ 180 ಎ.ಎಸ್.ಐ ಡಾಕ್ಟರ್‍ಗಳನ್ನು ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲು ಮತ್ತು ಪರೀಕ್ಷಾರ್ತಿ ತಹಶೀಲ್ದಾರ್‍ಗಳನ್ನು ಕೋವಿಡ್ ಆಸ್ಪತ್ರೆಗಳು/ಕೇರ್ ಸೆಂಟರ್‍ಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ಹಾಕಲು ಸೂಚಿಸಲಾಯಿತು.
  10. ಬೆಂಗಳೂರಿನಲ್ಲಿ ಲಭ್ಯವಿರುವ ಕಲ್ಯಾಣ ಮಂಟಪಗಳು, ಹಾಸ್ಟೆಲ್‍ಗಳು ಹಾಗೂ ಇನ್ನಿತರೆ ಸಂಸ್ಥೆಗಳನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಮೀಸಲಿಡಲು ಹಾಗೂ ರೈಲ್ವೆ ಇಲಾಖೆಯಿಂದ ಬೆಡ್‍ಗಳ ಕೋಚ್‍ನ್ನು ಪಡೆಯಲು ಅವಶ್ಯ ಕ್ರಮ ಜರುಗಿಸಲು ಸೂಚಿಸಲಾಯಿತು.
  11. ಕೋವಿಡ್‍ನಿಂದ ಮೃತರಾದ ದೇಹಗಳ ಅಂತ್ಯಕ್ರಿಯೆಯನ್ನು ಜರುಗಿಸಲು ಪ್ರತ್ಯೇಕ ತಂಡಗಳನ್ನು ರಚಿಸುವುದು ಹಾಗೂ ದೇಹಗಳ ಅಂತ್ಯಕ್ರಿಯೆಯ ಸಲುವಾಗಿ ಇನ್ನೂ ಹೆಚ್ಚಿನ ಜಾಗಗಳನ್ನು ಗುರುತಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತೀರ್ಮಾನಿಸಲಾಗಿದೆ.
  12. ಮೆಡಿಕಲ್ ಕಾಲೇಜ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳ ಪೈಕಿ ಶೇ.50 ರಷ್ಟನ್ನು ಕೋವಿಡ್ ರೋಗಿಗಳ ಸಲುವಾಗಿ ಮೀಸಲಿಡಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಯಿತು.
  13. ಆಸ್ಪತ್ರೆಗಳಲ್ಲಿ ಬೆಡ್‍ಗಳು ಪೂರ್ತಿಯಾದ ನಂತರ ರೋಗಿಗಳನ್ನು ಹೋಟೆಲ್‍ಗಳಕೊಠಡಿಗಳನ್ನು ಚಿಕಿತ್ಸೆಗಾಗಿ ಬಳಸಿಕೊಳ್ಳುವ ಉದ್ದೇಶದಿಂದ ಹೋಟೆಲ್‍ಗಳನ್ನು ಆಸ್ಪತ್ರೆಗಳಿಗೆ ಟೈಯಪ್ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT