ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ. ಇನ್ನೆಂದು ಜೆಡಿಎಸ್‌ನ ಸ್ಥಾನ ಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ.
— H D Kumaraswamy (@hd_kumaraswamy) December 19, 2020
12/12
ಜೆಡಿಎಸ್ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ. ನಂತರ ಜೆಡಿಎಸ್ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ.
— H D Kumaraswamy (@hd_kumaraswamy) December 19, 2020
11/12
37 ಸ್ಥಾನ ಗೆದ್ದಿದ್ದ ಜೆಡಿಎಸ್‌ಗೆ ನಾವು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟೆವು ಎಂದು ಸಿದ್ದರಾಮಯ್ಯ ಪದೇ ಪದೆ ಹೇಳುತ್ತಾರೆ. ಅದು 37 ಸ್ಥಾನವಾಗಲಿ, ಅಥವಾ 100 ಸ್ಥಾನಗಳಾದರೂ ಆಗಿರಲಿ. ಅದು ಜನಾದೇಶ. ಆ ವಿಚಾರದಲ್ಲಿ ಮೂದಲಿಕೆ ಮಾಡುವ ಸಿದ್ದರಾಮಯ್ಯ ಅವರಿಗೆ ಜನರ ಆಶಯ, ಅಭಿಪ್ರಾಯಗಳನ್ನು ಒಪ್ಪುವಂಥ ಮನಸ್ಥಿತಿಯೇ ಇಲ್ಲ.
— H D Kumaraswamy (@hd_kumaraswamy) December 19, 2020
10/12
ಸಿಎಂ ಸ್ಥಾನದಿಂದ ಇಳಿದ ನಂತರ ಸಿದ್ದರಾಮಯ್ಯ ಸರ್ಕಾರಿ ನಿವಾಸ ತೊರೆಯಲಿಲ್ಲ. ಆ ವಿಚಾರದಲ್ಲಿ ಕಿಂಚಿತ್ತೂ ನಾಚಿಕೆ ಪ್ರದರ್ಶಿಸಲಿಲ್ಲ. ತಾವು ಸಿಎಂ ಆಗಿದ್ದಾಗ 6 ಗಂಟೆಗೆ ಹೇಳದೇ ಕೇಳದೇ ಕಚೇರಿ ತೊರೆದು ಅಜ್ಞಾತರಾಗುತ್ತಿದ್ದ ಸಿದ್ದರಾಮಯ್ಯ, ರಾತ್ರಿ 12 ಗಂಟೆ ವರೆಗೆ ಕಚೇರಿಯಲ್ಲಿ ದುಡಿಯುತ್ತಿದ್ದ ನನ್ನ ಬಗ್ಗೆ ಮಾತನಾಡುವ ನೈತಿಕತೆ ಉಳ್ಳವರೇ?
— H D Kumaraswamy (@hd_kumaraswamy) December 19, 2020
9/12
ಕುಮಾರಸ್ವಾಮಿ ಸಿಎಂ ಆಗಿ ಕಚೇರಿಗೇ ಬರುತ್ತಿರಲಿಲ್ಲವಂತೆ, ತಾಜ್‌ವೆಸ್ಟ್‌ಎಂಡ್‌ನಲ್ಲಿ ಇರುತ್ತಿದ್ದರಂತೆ.
— H D Kumaraswamy (@hd_kumaraswamy) December 19, 2020
ಅಹೋರಾತ್ರಿ ಜನತಾ ದರ್ಶನ ತಾಜ್‌ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿತ್ತೋ? ಸಿಎಂ ಕಚೇರಿಯಲ್ಲಿ ನಡೆಯುತ್ತಿತ್ತೋ ಸಿದ್ದರಾಮಯ್ಯನವರೇ? ಬಾದಾಮಿಯಲ್ಲಿ ಈಗ ನಡೆಯುತ್ತಿರುವ 1200 ಕೋಟಿ ಕಾಮಗಾರಿಗಳು ತಾಜ್‌ವೆಸ್ಟ್‌ಎಂಡ್‌ನದ್ದ?
8/12
2018ರಲ್ಲಿ ಮೈತ್ರಿಯಾಗಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದು ಹೈಕಮಾಂಡ್‌ನ ನಿರ್ಧಾರವಾಗಿತ್ತು ಎಂದು ಸಿದ್ದರಾಮಯ್ಯ ಹಲವು ಬಾರಿ ಹೇಳಿದ್ದಾರೆ. ಆದರೆ, ಚಾಮುಂಡೇಶ್ವರಿ ಭಾಷಣದ ವೇಳೆ, ನಾನು ಒಪ್ಪದೇ ಹೋಗಿದ್ದಿದ್ದರೆ ಕುಮಾರಸ್ವಾಮಿ ಅವರನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂದಿದ್ದಾರೆ. ಇಲ್ಲಿ ದ್ವಂದ್ವ ಇಲ್ಲವೇ?
— H D Kumaraswamy (@hd_kumaraswamy) December 19, 2020
6/12
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.