ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ

Last Updated 8 ಆಗಸ್ಟ್ 2018, 5:33 IST
ಅಕ್ಷರ ಗಾತ್ರ

ಚಿತ್ರದುರ್ಗ: ಮಾಜಿ ಸಚಿವ ತಿಪ್ಪೇಸ್ವಾಮಿ (76) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು.

ಇವರಿಗೆ ಪತ್ನಿ ವಿಮಲಮ್ಮ, ಪುತ್ರ ಕೆ.ಟಿ.ಕುಮಾರಸ್ವಾಮಿ, ಪುತ್ರಿ ಕೆ.ಟಿ.ಭವ್ಯ ಇದ್ದಾರೆ. ನಾಲ್ಕು ದಶಕಗಳ ರಾಜಕೀಯ ಹೋರಾಟ, ಸಮುದಾಯಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ 2017ರಲ್ಲಿ ಇವರಿಗೆ ರಾಜ್ಯಮಟ್ಟದ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ನೀಡಿ ಪುರಸ್ಕರಿಸಿತ್ತು.

ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಕೊಲಂಬಿಯಾ ಏಷಿಯಾ ಅಸ್ಪತ್ರೆಗೆದಾಖಲಿಸಲಾಗಿತ್ತು.

ತಿಪ್ಪೇಸ್ವಾಮಿ ಅವರು ಚಳ್ಳಕೆರೆ ತಾಲ್ಲೂಕಿನ ಕಾಟಪ್ಪನಹಟ್ಟಿಯವರು. ಕಾರ್ಖಾನೆ ತಿಪ್ಪಯ್ಯ ಮತ್ತು ಬೋರಮ್ಮ ಅವರ ಐದನೇ ಪುತ್ರರು. 1942ರಲ್ಲಿ ಜನಿಸಿದ ಇವರು, ಪ್ರಾಥಮಿಕ ಶಿಕ್ಷಣವನ್ನು ಕಾಟಪ್ಪನಹಟ್ಟಿಯಲ್ಲಿ ಮುಗಿಸಿದ್ದರು.

1980ರಲ್ಲಿ ಚಳ್ಳಕೆರೆ ಪುರಸಭಾ ಅಧ್ಯಕ್ಷರಾಗಿ ರಾಜಕೀಯ ಪ್ರವೇಶಿಸಿದ ತಿಪ್ಪೇಸ್ವಾಮಿ ಅವರು, 1985ರಲ್ಲಿಪ್ರಥಮ ಬಾರಿಗೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು.

ಎಚ್.ಡಿ. ದೇವೇಗೌಡರ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಹಾಗೂ ಜೆ.ಎಚ್.ಪಟೇಲ್ ಅವರ ಆಡಳಿತದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ವಾಲ್ಮೀಕಿ ಸಮುದಾಯವನ್ನು ಸಂಘಟಿಸಿದರು. ಎಲ್ಲರ ಸಹಕಾರ ಪಡೆದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ 'ಶ್ರೀ ವಾಲ್ಮೀಕಿ ಗುರುಪೀಠ' ಸ್ಥಾಪಿಸಲು ಶ್ರಮಿಸಿದ್ದರು.

ಜೆಡಿಎಸ್ ಮೂಲಕ ರಾಜಕೀಯ ಆರಂಭಿಸಿದ್ದ ತಿಪ್ಪೇಸ್ವಾಮಿ ಅವರು ನಂತರ ಬಿಜೆಪಿ ಸೇರಿದ್ದರು. ಬಿ.ಎಸ್.ಯಡಿಯೂರಪ್ಪ ಜತೆ ಕೆಜೆಪಿಗೆ ಹೋಗಿ ಮತ್ತೆ ಬಿಜೆಪಿಗೆ ಮರಳಿದ್ದರು. ಇವರ ಪಾರ್ಥಿವ ಶರೀರವನ್ನು ಬುಧವಾರ ಮಧ್ಯಾಹ್ನ ಚಳ್ಳಕೆರೆಗೆ ತರಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT