ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿವೆ. ₹25 ಲಕ್ಷ ಲಂಚ ಪಡೆಯುವಾಗ ಅಬಕಾರಿ ಡಿಸಿ ಜಗದೀಶ ನಾಯಕ್ ಅವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಸನ್ನದು ನವೀಕರಣ, ವರ್ಗಾವಣೆಗಾಗಿ ದೊಡ್ಡ ಮಟ್ಟದ ಲಂಚ ವಸೂಲಿ, ಸಚಿವರೊಬ್ಬರ ಮಗ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿರುವುದು ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿದೆ. ಈ ಎಲ್ಲ ಬೆಳವಣಿಗೆಗಳ ಕುರಿತು ಪ್ರಜಾವಾಣಿ ಚರ್ಚೆಯಲ್ಲಿ ವಿಶದವಾಗಿ ಚರ್ಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.