ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
ರಹೇಜಾ ಪಾರ್ಕ್ ಕಾಮಾಕ್ಷಿಪಾಳ್ಯ ಮತ್ತು ಬಸವೇಶ್ವರನಗರದ ಪ್ರಕರಣಗಳಲ್ಲಿ ಕೆ.ವಿ.ಜಗನ್ನಾಥ ಅವರನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಪೊಲೀಸರ ವಶದಲ್ಲಿ ಇದ್ದಾಗಲೇ ಫಿನಾಯಿಲ್ ಕುಡಿದ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಇಲಾಖೆ ತಿಳಿಸಿದೆ. ಆರೋಪಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಆತ್ಮಹತ್ಯೆಗೆ ಯತ್ನಿಸಿದ ಸಂಬಂಧ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದೆ.