ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವರ್ಗಾವಣೆಯಿಂದ ವಿನಾಯಿತಿ: ಕಾಲೇಜು ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಗೂ ಅನ್ವಯ

Published 22 ಆಗಸ್ಟ್ 2024, 17:05 IST
Last Updated 22 ಆಗಸ್ಟ್ 2024, 17:05 IST
ಅಕ್ಷರ ಗಾತ್ರ

ಬೆಂಗಳೂರು: ಅಂಗವಿಕಲ ನೌಕರರು ಮತ್ತು ತಮ್ಮ ಮೇಲೆ ಅವಲಂಬಿತವಾಗಿರುವ ಅಂಗವಿಕಲರನ್ನು ಹೊಂದಿರುವ ನೌಕರರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಅಥವಾ ಹತ್ತಿರದ ಸ್ಥಳಗಳಿಗೆ ನಿಯುಕ್ತಿಗೊಳಿಸುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶವನ್ನು ಕಾಲೇಜು ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಗೂ ಅನ್ವಯಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ.

ಇದಕ್ಕಾಗಿ ಕರ್ನಾಟಕ ಸಿವಿಲ್‌ ಸೇವೆಗಳು(ಕಾಲೇಜು ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) 2 ನೇ ತಿದ್ದುಪಡಿ ನಿಯಮಗಳು 2024 ಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT