ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಯುಕ್ತ ಹರ್ಷ ಹೊರಗಿಟ್ಟು ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Published : 21 ಡಿಸೆಂಬರ್ 2019, 7:31 IST
ಫಾಲೋ ಮಾಡಿ
Comments

ಮಂಗಳೂರು: ನಗರ ಪೊಲೀಸ್ ಆಯುಕ್ತ ಡಾ.ಹರ್ಷ ಅವರನ್ನುಹೊರಗಿಟ್ಟು ಮಂಗಳೂರು ವಿಮಾನನಿಲ್ದಾಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಶನಿವಾರ ನಡೆಸಿದ್ದಾರೆ.

ಶನಿವಾರ ಮಧ್ಯಾಹ್ನ ವಿಮಾನ ನಿಲ್ದಾಣದಲ್ಲಿ ಇಳಿದ ಕೂಡಲೇ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಅಮರ್ ಕುಮಾರ್ ಪಾಂಡೆ ( ಕಾನೂನು ಮತ್ತು ಸುವ್ಯವಸ್ಥೆ ) ಹಾಗೂ ದಯಾನಂದ (ಸಿಐಡಿ) ಅವರ ಜೊತೆ ಪ್ರತ್ಯೇಕವಾಗಿ ಸುಮಾರು 10 ನಿಮಿಷಗಳ ಕಾಲ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಈ ಸಮಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರು ಸರ್ಕಿಟ್ ಹೌಸ್‌‌ನಲ್ಲಿಯೇ ಇದ್ದರು ಎನ್ನಲಾಗಿದೆ. ನಂತರ ಸರ್ಕಿಟ್ ಹೌಸ್ ಕಡೆಗೆ ಕಾರಿನಲ್ಲಿ ಪ್ರಯಾಣಿಸಿದ ಮುಖ್ಯಮಂತ್ರಿ ಅಲ್ಲಿ ಎರಡನೇ ಸಭೆ ನಡೆಸಿದ್ದಾರೆ.

ಸರ್ಕಿಟ್ ಹೌಸ್‌‌ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಅಮರ್ ಕುಮಾರ್ ಪಾಂಡೆ , ದಯಾನಂದ ಹಾಗೂ ಪೊಲೀಸ್ ಆಯುಕ್ತ ಡಾ.ಹರ್ಷ ಭಾಗವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT