ಬೆಂಗಳೂರು: ‘ಬಿಜೆಪಿಗೆ ವಾಪಸ್ ಬರುತ್ತೇನೋ ಇಲ್ಲವೊ ಗೊತ್ತಿಲ್ಲ. ಆದರೆ, ರಾಜ್ಯಕ್ಕೆ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿದೆ. ಮುಲಾಜಿಲ್ಲದೇ ಹೊಸ ಪಕ್ಷ ಕಟ್ಟುತ್ತೇನೆ. ಮುಂದಿನ ಸರ್ಕಾರದಲ್ಲಿ ಪ್ರಮುಖ ಪಾತ್ರವಹಿಸುತ್ತೇನೆ’ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಪ್ರಾಮಾಣಿಕರಿಗೆ ಅವಕಾಶ ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲಿದೆ. ಹೈಕಮಾಂಡ್ಗೆ ಬ್ಲ್ಯಾಕ್ ಮೇಲ್ ಮಾಡಿದವರಿಗೇ ಅವಕಾಶ ಕೊಟ್ಟರೆ ಬಿಜೆಪಿ ಗೆಲ್ಲುವುದಿಲ್ಲ’ ಎಂದರು.

‘ಬಿಜೆಪಿಯಲ್ಲಿ ವ್ಯವಸ್ಥಿತವಾಗಿ ಯಾವುದೇ ಕೆಲಸ ನಡೆಯುತ್ತಿಲ್ಲ. ಅಲ್ಲಿ ಪಕ್ಷಕ್ಕಿಂತ ವ್ಯಕ್ತಿ ವೈಭವೀಕರಣವೇ ಹೆಚ್ಚಾಗಿದೆ. ತಮ್ಮ ಹಿಂದೆ ಮಠಾಧೀಶರು, ಸ್ವಾಮೀಜಿಯವರು ಇದ್ದಾರೆ ಅಂತ ‘ಪೂಜ್ಯ ತಂದೆ’ಯವರು ತೋರಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಜತೆ ಯಡಿಯೂರಪ್ಪ ಕುಟುಂಬ ಫೋಟೊ ತೆಗೆಸಿಕೊಂಡಿದೆ. ಏಕೆಂದರೆ ಯಡಿಯೂರಪ್ಪ ಕುಟುಂಬದಿಂದ ಬಿಜೆಪಿ ಮುಕ್ತ ಎಂಬ ಕಾರಣಕ್ಕೆ ಫೋಟೊ ತೆಗೆಸಿಕೊಳ್ಳುತ್ತಿದ್ದಾರೆ’ ಎಂದು ಯತ್ನಾಳ ಹೇಳಿದರು.

‘ಡಿ.ವಿ.ಸದಾನಂದಗೌಡ ಅವರು ಯಡಿಯೂರಪ್ಪ ಅವರಿಗೆ ಬೈಯ್ಯುತ್ತಿದ್ದರು. ಈಗ ರಾಜ್ಯಸಭಾ ಸ್ಥಾನಕ್ಕಾಗಿ ಅವರ ಬೆನ್ನ ಹಿಂದೆ ಬಿದ್ದಿದ್ದಾರೆ. ಒಂದು ವೇಳೆ ಅವಕಾಶ ತಪ್ಪಿದರೆ, ಸದಾನಂದಗೌಡ ಹೇಗೆ ತಿರುಗಿ ಬೀಳುತ್ತಾರೆ ನೋಡಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.