ಬೆಂಗಳೂರು: ಗ್ರಾಮ ಪಂಚಾಯತಿಗಳ ಹಾಲಿ ಸದಸ್ಯರನ್ನೇ ಆರು ತಿಂಗಳು ಮುಂದುವರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ವತಿಯಿಂದ ಗುರುವಾರ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ ರೇವಣ್ಣ ಸೇರಿದಂತೆ ಹಲವರು ಗುರುವಾರ ರಾಜ್ಯ ಚುನಾವಣಾ ಅಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಅಧಿಕಾರ ಅವಧಿ ಮುಗಿಯುವ ಹಂತಕ್ಕೆ ಬಂದಿದ್ದು, ಚುನಾವಣೆ ನಡೆಸುವ ಸಾಧ್ಯತೆ ಇಲ್ಲದಿರುವ ಕಾರಣ ಮುಂದೇನು ಮಾಡಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಗೊಂದಲವುಂಟಾಗಿದೆ. ವಿಶೇಷ ಸಮಿತಿ ಅಥವಾ ಆಡಳಿತಾಧಿಕಾರಿಗಳನ್ನು ನೇಮಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆಯಾದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಹಾಲಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಇನ್ನೂ ಆರು ತಿಂಗಳು ಮುಂದುವರಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಮಧ್ಯೆ ಜೆಡಿಎಸ್ ಕೂಡ ಸದಸ್ಯರ ಅಧಿಕಾರವಧಿಯನ್ನು ಮುಂದುವರಿಸುವ ಪ್ರಸ್ತಾವ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.