ಬೆಂಗಳೂರು: ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸುವ ಬೆಳೆ ಸಾಲ ಹಾಗೂ ಸ್ವಸಹಾಯ ಸಂಘಗಳು ಕಟ್ಟಬೇಕಾದ ಸಾಲದ ಕಂತುಗಳ ಅವಧಿಯನ್ನು ಆಗಸ್ಟ್ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹ 3 ಲಕ್ಷವರೆಗೆ ಅಲ್ಪಾವಧಿ ಬೆಳೆ ಸಾಲ ಮತ್ತು ಶೇ 3 ಬಡ್ಡಿ ದರದಲ್ಲಿ ₹ 10 ಲಕ್ಷವರೆಗೆ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ವಿತರಣೆ ಮತ್ತು ಕಾಯಕ ಯೋಜನೆಯಡಿ ಸ್ವಸಹಾಯ ಸಂಘಗಳಿಂದ ನೀಡಲಾಗಿದ್ದ ಸಾಲ ಮರುಪಾವತಿಗೆ ಜೂನ್ ಅಂತ್ಯದವರೆಗೆ ಈ ಹಿಂದೆ ಅವಕಾಶ ನೀಡಲಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಿಸಲಾಗಿದೆ.

ಮರುಪಾವತಿ ದಿನದವರೆಗೆ ಪಾವತಿಸಬೇಕಾದ ತನ್ನ ಪಾಲಿನ ಬಡ್ಡಿ ಸಹಾಯಧನ ₹ 40.11 ಕೋಟಿಯನ್ನು ಸರ್ಕಾರವು ಸಹಕಾರ ಸಂಘಗಳಿಗೆ ಪಾವತಿಸಲಿದೆ. ಸೆಪ್ಟೆಂಬರ್ ಅಂತ್ಯವರೆಗಿನ ತ್ರೈಮಾಸಿಕ ಕ್ಲೈಮ್ ಬಿಲ್‌ಗಳನ್ನು ಡಿಸೆಂಬರ್ ಅಂತ್ಯದೊಳಗೆ ನಿಬಂಧಕರು ಸಲ್ಲಿಸುವಂತೆ ಸಹಕಾರ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.