ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಎಸ್‌ಆರ್‌ಪಿ ಗಡುವು: ಮೇ 31ರವರೆಗೆ ವಿಸ್ತರಣೆ

Published 16 ಫೆಬ್ರುವರಿ 2024, 15:34 IST
Last Updated 16 ಫೆಬ್ರುವರಿ 2024, 15:34 IST
ಅಕ್ಷರ ಗಾತ್ರ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅವಧಿಯನ್ನು ರಾಜ್ಯ ಸರ್ಕಾರವು ಮೇ 31ರವರೆಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.

2019ರ ಏಪ್ರಿಲ್‌ ನಂತರದ ವಾಹನಗಳ ನೋಂದಣಿ ಮಾಡಿಕೊಳ್ಳುವಾಗಲೇ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿರುತ್ತದೆ. ಅದಕ್ಕಿಂತ ಹಿಂದೆ ನೋಂದಣಿಯಾಗಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಆದೇಶ ಹೊರಡಿಸಲಾಗಿತ್ತು. 2023ರ ಆಗಸ್ಟ್ 17ರಿಂದ ನವೆಂಬರ್‌ 16ರವರೆಗೆ ಮೂರು ತಿಂಗಳ ಅವಕಾಶ ನೀಡಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ವಾಹನ ಮಾಲೀಕರಿಂದ ಸ್ಪಂದನೆ ದೊರೆತಿರಲಿಲ್ಲ. ಬಳಿಕ ಫೆ.17ರವರೆಗೆ ವಿಸ್ತರಿಸಲಾಗಿತ್ತು. ಶೇ 10ರಷ್ಟು ವಾಹನಗಳಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದರಿಂದ ಮತ್ತೆ ಅವಧಿ ವಿಸ್ತರಣೆ ಮಾಡುವಂತೆ ಕೂಗು ಎದ್ದಿತ್ತು.

ಈ ಬಗ್ಗೆ ವಿಧಾನ ಮಂಡಲದ ಕಲಾಪದಲ್ಲಿಯೂ ಪ್ರಸ್ತಾಪವಾದಾಗ ಅವಧಿ ವಿಸ್ತರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದರು. ಶುಕ್ರವಾರ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT