ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್‌

‘ಅಮ್ಮ’ ಪ್ರಶಸ್ತಿ ಸ್ವೀಕರಿಸಿದ ಪ್ರಕಾಶ್‌ ರೈ
Published : 26 ನವೆಂಬರ್ 2018, 19:39 IST
ಫಾಲೋ ಮಾಡಿ
Comments

ಕಲಬುರ್ಗಿ: ಸೇಡಂ ಪಟ್ಟಣದಲ್ಲಿ ಸೋಮವಾರ ‘ಅಮ್ಮ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ಪ್ರಕಾಶ್ ರೈ ಪಾಲ್ಗೊಳ್ಳುವುದನ್ನು ವಿರೋಧಿಸಿ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹವೊಂದನ್ನು ಪೋಸ್ಟ್ ಮಾಡಲಾಗಿದೆ.

ಜಿಲ್ಲಾ ಬಿಜೆಪಿ ಯುವ ಘಟಕದ ಉಪಾಧ್ಯಕ್ಷ ಶಾಂತವೀರ ಗೋಣಿ ಎಂಬುವರ ಹೆಸರಿನಲ್ಲಿ ಈ ಪೋಸ್ಟ್ ಮಾಡಲಾಗಿದ್ದು, ಪ್ರಕಾಶ್ ರೈ ಅವರನ್ನು ಅವಮಾನಕರವಾಗಿ ನಿಂದಿಸಲಾಗಿದೆ.

ಸಂಜೆ ನಡೆದ ಸಮಾರಂಭದಲ್ಲಿ ಪಾಲ್ಗೊಂಡು‘ಅಮ್ಮ’ ಪ್ರಶಸ್ತಿ ಸ್ವೀಕರಿಸಿದ ಪ್ರಕಾಶ್‌ ರೈ, ವಿವಾದವುಂಟಾಗುವ ಯಾವುದೇ ಮಾತು ಆಡಲಿಲ್ಲ. ‘ನಾನು ಯಾವ ಪಕ್ಷದವನೂ ಅಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ಹೂಡಿಕೆದಾರರು. ಅದನ್ನು ಕಾಪಾಡುವುದು ನಮ್ಮೆಲ್ಲರ ಹೊಣೆ’ ಎಂದರು.

‘ಪ್ರಕಾಶ್ ರೈ ವಿರುದ್ಧ ಪ್ರತಿಭಟನೆ ಮಾಡಲು ಬಿಜೆಪಿಯ ಕೆಲವು ಯುವಕರು ಮತ್ತು ವಿಶ್ವ ಹಿಂದೂ ಪರಿಷತ್ ಸದಸ್ಯರು ಸೇರಿದ್ದರು. ಆದರೆ, ಯಾವುದೇ ರೀತಿಯ ಪ್ರತಿಭಟನೆ ನಡೆಯಲಿಲ್ಲ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಿತು. ಅವಹೇಳನಕಾರಿ ಪೋಸ್ಟ್ ಬಗ್ಗೆ ಮಾಹಿತಿ ಇಲ್ಲ. ಯಾರಾದರೂ ದೂರು ಕೊಟ್ಟರೆ ಕ್ರಮಕೈಗೊಳ್ಳಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT