ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗವಿಕಲರ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

Published 9 ನವೆಂಬರ್ 2023, 15:19 IST
Last Updated 9 ನವೆಂಬರ್ 2023, 15:19 IST
ಅಕ್ಷರ ಗಾತ್ರ

ಬೆಂಗಳೂರು: ‘ಅಂಧರು ಮತ್ತು ಅಂಗವಿಕಲರಿಗೆ ನೆರವಾಗುವ ನಿಟ್ಟಿನಲ್ಲಿ ಬಸ್‌ಗಳಲ್ಲಿ ಆಡಿಯೊ ರೂಪದಲ್ಲಿನ ಪ್ರಕಟಣಾ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್‌ಗಳಿಗೆ ನಿರ್ದೇಶನ ನೀಡಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಈ ಸಂಬಂಧ ನಗರದ ಎನ್. ಶ್ರೇಯಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೊ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ, ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್‌ಗಳೂ ಸಂಚರಿಸುತ್ತಿವೆ. ಈ ಬಸ್‌ಗಳಲ್ಲಿ ಅಂಗವಿಕಲರ ಪ್ರಯಾಣಕ್ಕೆ ಅಗತ್ಯ ನೆರವು ಕಲ್ಪಿಸಿ ಕೊಡಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.

‘ಈ ವಿಷಯದಲ್ಲಿ ಸರ್ಕಾರ ಖಾಸಗಿ ಬಸ್ ಆಪರೇಟರ್‌ಗಳಿಗೆ ಅಗತ್ಯ ನಿರ್ದೇಶನ ನೀಡಿ ಸುತ್ತೋಲೆ ಹೊರಡಿಸಬೇಕು. ಈ ನಿರ್ದೇಶನ ಈಗಾಗಲೇ ಕೆಲವು ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್‌ಗಳಿಗೆ ಮಾತ್ರವಲ್ಲದೆ, ಹೊಸದಾಗಿ ಪರವಾನಗಿ ನೀಡುವ ಬಸ್ ಗಳಿಗೂ ಅನ್ವಯವಾಗುವಂತೆ ಇರಬೇಕು’ ಎಂದು ತಾಕೀತು ಮಾಡಿದೆ.

ಬಿಎಂಟಿಸಿ ಮತ್ತು ರಾಜ್ಯ ಸರ್ಕಾರ ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸುವಂತೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT