ಬೆಂಗಳೂರು: ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಶುಕ್ರವಾರ ಇ-ಮೇಲ್ ಮೂಲಕ ಬಂದಿದ್ದ ಬಾಂಬ್ ಬೆದರಿಕೆಯ ಸಂದೇಶವು ಕೆಲಕಾಲ ಆತಂಕ ಸೃಷ್ಟಿಸಿತ್ತು.

ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇರುವ ಸಿಟಿ ಸಿವಿಲ್ ಕೋರ್ಟ್ನ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

‘ಕೋರ್ಟ್ ಆವರಣದಲ್ಲಿ ಬಾಂಬ್ ಇಡಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಅದು ಸ್ಫೋಟಗೊಳ್ಳಲಿದೆ’ ಎಂದು ಕಿಡಿಗೇಡಿಗಳು ಸಂದೇಶ ಕಳುಹಿಸಿದ್ದರು. ಕೂಡಲೇ ಕೋರ್ಟ್ ಸಿಬ್ಬಂದಿ ಹಲಸೂರು ಗೇಟ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ, ಇಡೀ ಕೋರ್ಟ್ ಆವರಣವನ್ನು ತಪಾಸಣೆ ನಡೆಸಿದ್ದರು. ಆದರೆ, ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ.

ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಗೊತ್ತಾಗಿದೆ. ನಕಲಿ ಸಂದೇಶ ಕಳುಹಿಸಿದ್ದ ವ್ಯಕ್ತಿಯ ವಿರುದ್ಧ
ಹಲಸೂರು ಗೇಟ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಇದೇ ವೇಳೆ ಹೈಕೋರ್ಟ್ನ ಇ–ಮೇಲ್ ವಿಳಾಸಕ್ಕೂ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಕೂಡಲೇ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲೂ ತಪಾಸಣೆ ನಡೆಸಲಾಯಿತು. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಸಂದೇಶ ಎಂಬುದು ಗೊತ್ತಾಗಿದೆ.

ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಇ-ಮೇಲ್ಗೆ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಮಧ್ಯಾಹ್ನ 2.45ರ ಸುಮಾರಿಗೆ ಸ್ಥಳ ತೊರೆಯುವಂತೆ ಸೂಚಿಸಿಲಾಗಿತ್ತು. ತಮಿಳುನಾಡು ಸರ್ಕಾರ, ಅಲ್ಲಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಬಿಹಾರದ ಜನ ಸ್ವರಾಜ್ ಪಕ್ಷದ ಪ್ರಶಾಂತ್ ಕಿಶೋರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖ್ಯ ಸಲಹೆಗಾರ ಸುನಿಲ್ ಕನುಗೋಲು ಅವರ ಹೆಸರನ್ನು ಇ-ಮೇಲ್ನಲ್ಲಿ ಪ್ರಸ್ತಾಪಿಸಲಾಗಿತ್ತು ಎಂದು ಪೊಲೀಸರು ಹೇಳಿದರು.

ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.