‘ಕೋಲಾರದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ–2ರಲ್ಲಿನ ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ಕೋರಿ ಜಿ.ಮಂಜುನಾಥ್ (39) ಕೊತ್ತೂರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ‘ಶಾಸಕರು–ಸಂಸದರ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಆದೇಶ ಕಾಯ್ದಿರಿಸಿರುವುದಾಗಿ ಪ್ರಕಟಿಸಿದರು.