ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಹೆಸರಿನಲ್ಲಿ ಡಿಕೆಶಿ ವಿರುದ್ಧ ನಕಲಿ ಪತ್ರ: BJP ಮೇಲೆ ಮಾಜಿ CM ಗರಂ

Last Updated 2 ಫೆಬ್ರುವರಿ 2023, 15:57 IST
ಅಕ್ಷರ ಗಾತ್ರ

ಬೆಂಗಳೂರು: ನನ್ನ ಹೆಸರಿನಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಬರೆದಿರುವ ಪತ್ರ ನಕಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರದ ಸಮೇತ ಟ್ವೀಟ್ ಮಾಡಿದ್ದಾರೆ.

ಭಾರತ್ ಜೋಡೊ ಯಾತ್ರೆಯ ಸಮಾರೋಪದಲ್ಲಿ ಸಿದ್ದರಾಮಯ್ಯ ಭಾಗಿಯಾಗಿರಲಿಲ್ಲ ಹಾಗೂ ಟಿಕೆಟ್ ಹಂಚಿಕೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಗುಂಪುಗಾರಿಕೆ ಇದೆ. ಇದು ಬಂಡಾಯಕ್ಕೆ ಕಾರಣವಾಗುತ್ತದೆ ಎನ್ನುವ ಅರ್ಥದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ನಕಲಿ ಪತ್ರದಲ್ಲಿ ಬಿಂಬಿಸಲಾಗಿದೆ.

ಈ ಪತ್ರದ ಪ್ರತಿಯನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ನಾನು ಈ ರೀತಿಯ ಯಾವುದೇ ಪತ್ರ ಬರೆದಿಲ್ಲ. ಇದು ದುರುದ್ದೇಶಪೂರಿತ ನಕಲಿ ಪತ್ರ. ನಮ್ಮ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಲು ಈ ರೀತಿ ಬಿಜೆಪಿ ಕಾರ್ಯಕರ್ತರು ಕುತಂತ್ರ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರಂತೆಯೇ ತೀರಾ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ‌ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ಖೊಟ್ಟಿ ಪತ್ರವನ್ನು ಹರಿಯಬಿಡಲಾಗಿದೆ. ಈ ಬಗ್ಗೆ ನಾನು ಪೋಲಿಸರಿಗೆ ದೂರು ನೀಡಲಿದ್ದು, ಈ ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುತ್ತಾರೆಂದು ನಂಬಿದ್ದೇನೆ ಎಂದಿದ್ದಾರೆ.

ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT